1,553 ಎಚ್1ಎನ್1 ಪ್ರಕರಣ ಪತ್ತೆ
Team Udayavani, Dec 22, 2018, 6:00 AM IST
ವಿಧಾನಸಭೆ: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 1553 ಎಚ್1ಎನ್1 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದರು. ಶಾಸಕ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, 2018ರ ಜನವರಿ 1ರಿಂದ ಡಿ.10ರವರೆಗೆ 1553 ಎಚ್1ಎನ್1 ಪ್ರಕರಣಗಳು ಕಾಣಿಸಿಕೊಂಡಿರುವುದು ಅಧಿಕೃತ ಪ್ರಯೋಗಾಲಯಗಳಲ್ಲಿ ದೃಢಪಟ್ಟಿದೆ. ಇದರಲ್ಲಿ 1494 ಮಂದಿ ಗುಣ
ಮುಖರಾಗಿದ್ದು, 59 ಜನ ಮೃತರಾಗಿದ್ದಾರೆ. ಈ ಸೋಂಕಿನಿಂದ ಧಾರವಾಡದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿ, ಬೆಂಗಳೂರು ನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಂಡು ಬಂದಿದ್ದಾರೆ. ಎಚ್1ಎನ್1 ಸೋಂಕಿನಿಂದ ಬಳಲುತ್ತಿರುವವರಿಗೆ ಜಿಲ್ಲಾಸ್ಪತ್ರೆಗಳಲ್ಲಿ 5 ಹಾಸಿಗೆಯ ವಾರ್ಡ್ ಕಾಯ್ದಿರಿಸಲಾಗಿದೆ. ಸೋಂಕಿತರ ಗಂಟಲಿನ ದ್ರವದ
ಮಾದರಿಗಳನ್ನು ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.