ರಾಜ್ಯದಲ್ಲಿ ಇಂದು 15785 ಜನರಿಗೆ ಕೋವಿಡ್ ಸೋಂಕು : 146 ಮಂದಿ ಸಾವು!
Team Udayavani, Apr 19, 2021, 7:41 PM IST
ಬೆಂಗಳೂರು : ಕೋವಿಡ್ ಸೋಂಕು ಇಂದು(ಸೋಮವಾರ ಏ.19) ಕೂಡ ರಾಜ್ಯದಲ್ಲಿ ಅಟ್ಟಹಾಸ ಮೆರೆದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 15785 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,76,850 ಕ್ಕೆ ಏರಿಕೆಯಾಗಿದೆ.
ಇನ್ನು ಕೊರೋನಾಗೆ ರಾಜ್ಯದಲ್ಲಿಂದು ಬರೋಬ್ಬರಿ 146 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ರಾಜ್ಯದಲ್ಲಿ13497 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 97 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5220 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು ಕೋವಿಡ್ ನಿಂದ ಗುಣಮುಖರಾಗಿ 7098 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ 10,21,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜ್ಯದಲ್ಲಿ 1,42,084 ಸಕ್ರೀಯ ಸೋಂಕಿತರು ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.