ಕೋವಿಡ್-19: ರಾಜ್ಯದಲ್ಲಿ ಮತ್ತೆ 17 ಹೊಸ ಪ್ರಕರಣಗಳು, ಇಬ್ಬರು ಸಾವು
Team Udayavani, May 14, 2020, 12:53 PM IST
ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ರಾಜ್ಯದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ರಾಜ್ಯದಲ್ಲಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 17 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಬುಧವಾರ ರಾತ್ರಿ ಐದು ಜನರಿಗೆ ಸೋಂಕು ದೃಢವಾಗಿದ್ದು, ಬುಧವಾರ ಸಂಜೆ 5 ಗಂಟೆಯ ನಂತರ ಇದುವರೆಗೆ ಒಟ್ಟು 22 ಜನರ ದೇಹದೊಳಗೆ ಕೋವಿಡ್-19 ಸೋಂಕು ಹೊಕ್ಕಿದೆ.
ಬೆಂಗಳೂರು ನಗರದಲ್ಲಿ ಐವರಿಗೆ ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 554ರ ಸಂಪರ್ಕದಿಂದ ನಾಲ್ವರಿಗೆ ಸೋಂಕು ತಾಗಿದ್ದರೆ ಸೋಂಕಿತ ಸಂಖ್ಯೆ 555ರ ಸಂಪರ್ಕದಿಂದ 10 ವರ್ಷದ ಬಾಲಕನಿಗೆ ಸೋಂಕು ದೃಢವಾಗಿದೆ.
ಗದಗದಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಈ ನಾಲ್ವರೂ ಅಹಮದಾಬಾದ್ ಪ್ರಯಾಣದ ಹಿನ್ನಲೆ ಹೊಂದಿದ್ದಾರೆ. ಬೆಳಗಾವಿಯಲ್ಲಿ 27 ವರ್ಷದ ಗರ್ಭಿಣಿ ಮಹಿಳೆಗೆ ಸೋಂಕು ತಾಗಿದ್ದು, ಈಕೆ ಮುಂಬೈನ ಧಾರಾವಿ ಸ್ಲಂ ನಿಂದ ಇತ್ತೀಚೆಗೆ ಬಂದಿದ್ದರು.
ಬೀದರ್ ನ ನಾಲ್ಕು ಜನರಿಗೆ ಸೋಂಕು ತಾಗಿದೆ. ಅದರಲ್ಲಿ 45 ವರ್ಷದ ಮಹಿಳೆ ಮುಂಬೈ ಪ್ರಯಾಣ ಮಾಡಿದ್ದು, ಉಳಿದ ಮೂವರು ಬೀದರ್ ನ ಕಂಟೈನ್ ಮೆಂಟ್ ಝೋನ್ ನ ಸಂಪರ್ಕಕ್ಕೆ ಬಂದಿದ್ದರು.
ಬಾಗಲಕೋಟೆಯ 23 ವರ್ಷದ ಯುವಕ ದೇಶೀಯ ಪ್ರಯಾಣದ ಹಿನ್ನಲೆ ಹೊಂದಿದ್ದು, ಸೋಂಕು ದೃಢವಾಗಿದೆ. ದಾವಣಗೆರೆಯಲ್ಲಿ ಇಬ್ಬರಿಗೆ ಸೋಂಕು ತಾಗಿದ್ದು, ಓರ್ವ ಕಂಟೈನ್ ಮೆಂಟ್ ಝೋನ್ ಸಂಪರ್ಕಕ್ಕೆ ಬಂದಿದ್ದರೆ, ಮತ್ತೋರ್ವ ಶೀತ ಜ್ವರದಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ.
ಇಬ್ಬರು ಸಾವು: 80 ವರ್ಷದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪಾರ್ಶ್ವವಾಯು ಸಮಸ್ಯೆಯಿಂದ ದಾಖಲಾಗಿದ್ದರು. ಎಪ್ರಿಲ್ 24 ರಂದು ಸೋಂಕು ಕಾರಣದಿಂದ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಇಂದು ನಿಧನ ಹೊಂದಿದ್ದಾರೆ.
ಆಂಧ್ರಪ್ರದೇಶದ ಅನಂತಪುರ ನಿವಾಸಿ 60 ವರ್ಷದ ವೃದ್ಧ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸೋಂಕು ಕಂಡುಬಂದಿತ್ತು. ಇಂದು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಸೋಂಕಿನ ಕಾರಣದಿಂದ 35 ಜನರು ಸಾವನ್ನಪ್ಪಿದ್ದು, 456 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.