ಶಿಕ್ಷಕರ ಮಿತ್ರದಲ್ಲಿ 17 ಸೇವೆಗಳು ಆನ್ಲೈನ್
Team Udayavani, Sep 10, 2022, 6:20 AM IST
ಬೆಂಗಳೂರು: ವರ್ಗಾವಣೆ ಹಾಗೂ ರಜೆ ಪಡೆಯುವುದಕ್ಕಾಗಿ ಬಳಸುತ್ತಿದ್ದ ಶಿಕ್ಷಣ ಇಲಾಖೆಯ “ಶಿಕ್ಷಕ ಮಿತ್ರ’ ತಂತ್ರಾಂಶವನ್ನು ಇನ್ನು ಮುಂದೆ ಪಾಸ್ಪೋರ್ಟ್ ಸಲ್ಲಿಕೆ, ವಿದೇಶ ಪ್ರವಾಸ, ಉನ್ನತ ಶಿಕ್ಷಣಕ್ಕೆ ಅನುಮತಿ ಸಹಿತ ವಿವಿಧ 17 ಸೇವೆಗಳನ್ನು ಆನ್ಲೈನ್ಗೊಳಿಸಿದೆ.
ಸೆ.15ರಿಂದ ಭೌತಿಕ ಪ್ರಸ್ತಾವನೆಗಳನ್ನು ಸಲ್ಲಿಸುವ ಕ್ರಮವನ್ನು ರದ್ದುಪಡಿಸಲಾಗಿದೆ. ಪ್ರತಿಯೊಬ್ಬ ಶಿಕ್ಷಕರು ತಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ಗಳನ್ನು ಹೊಂದಿರಬೇಕು. ಅನಂತರ ಸೇವೆಗಳನ್ನು ಪಡೆಯಲು ಆನ್ಲೈನ್ ಮೂಲಕವೇ ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಡಾ| ಆರ್. ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.
ಇಲಾಖೆಯಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಶಿಕ್ಷಕರ/ಸಿಬಂದಿ ಪ್ರಸ್ತಾವನೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವುದಕ್ಕಾಗಿ 2020ರ ಆ.28ರಿಂದ ಶಿಕ್ಷಕ ಮಿತ್ರ ತಂತ್ರಾಂಶವನ್ನು ಬಳಸಲಾಗುತ್ತಿದೆ. ಈಗ ಸೇವೆಗಳನ್ನು ಆನ್ಲೈನ್ ಮೂಲಕವೇ ಪರಿಣಾಮಕಾರಿಯಾಗಿ ಜಾರಿಗೆ ಮಾಡುವುದಕ್ಕಾಗಿ ಶಿಕ್ಷಕ ಮಿತ್ರ ತಂತ್ರಾಂಶ ಬಳಸಿಕೊಳ್ಳಲಾಗುತ್ತಿದೆ. 2.6 ಲಕ್ಷ ಸಿಬಂದಿಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.