ಸಾಲಮನ್ನಾ: 1.70 ಲಕ್ಷ ರೈತರ ದಾಖಲೆ ಹೊಂದಾಣಿಕೆಯಾಗುತ್ತಿಲ್ಲ
Team Udayavani, Mar 1, 2019, 1:08 AM IST
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ 1.70 ಲಕ್ಷ ರೈತರ ದಾಖಲೆಗಳು ಹೊಂದಾಣಿಕೆಯಾಗುತ್ತಿಲ್ಲ ಎಂದು ಸಾಲ ಮನ್ನಾ ಯೋಜನೆ ಸಂಯೋಜನಾಧಿಕಾರಿ ಮನೀಶ್ ಮೌದ್ಗಿಲ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಟ್ಟು 17 ಲಕ್ಷ ರೈತರು ಸಾಲ ಪಡೆದಿದ್ದು ಆ ಕುರಿತು ದಾಖಲೆ ನೀಡುವಂತೆ ರೈತರಿಗೆ ಸೂಚಿಸಲಾಗಿತ್ತು. ರೈತರು ಸಲ್ಲಿಸಿರುವ ದಾಖಲೆ ಪರಿಶೀಲನೆ ವೇಳೆ ಶೇ.10ರಷ್ಟು ಅಂದರೆ 1.70 ಲಕ್ಷ ದಾಖಲೆ ಹೊಂದಾಣಿಕೆಯಾಗುತ್ತಿಲ್ಲ ಎಂದು ಹೇಳಿದರು.
ರೈತರು ಸಮರ್ಪಕ ದಾಖಲೆ ಕೊಟ್ಟಿಲ್ಲ. ಮತ್ತೂಮ್ಮೆ ದಾಖಲೆ ನೀಡುವಂತೆ ಸೂಚಿಸಲಾಗಿದೆ. ಸಹಕಾರ ಬ್ಯಾಂಕುಗಳಲ್ಲಿ 18.5 ಲಕ್ಷ ರೈತರು ಸಾಲ ಪಡೆದಿದ್ದು ಆ ಕುರಿತ ದಾಖಲೆಗಳು ಸಹ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು. ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಒಟ್ಟು 10.50 ಲಕ್ಷ ರೈತರ ಸಾಲ ಮನ್ನಾಗೆ 4163 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರತಿವಾರ ಸಾಲಮನ್ನಾ ಕುರಿತು ಮಾಹಿತಿ ವೆಬ್ಸೈಟ್ಗೆ ಅಪ್ಡೇಟ್ ಮಾಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.