18 ಸಾವಿರ ಕೋಟಿ ರೂ. ಹೂಡಿಕೆ: 27 ಸಾವಿರ ಉದ್ಯೋಗ ಸೃಷ್ಟಿ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ ಅನುಮೋದನೆ
Team Udayavani, Mar 9, 2024, 6:50 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿ) 63ನೇ ಸಭೆಯಲ್ಲಿ, ಸುಮಾರು 27,067 ಉದ್ಯೋಗ ಸೃಷ್ಟಿಸುವ 17,835.9 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ , ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ.ಅತೀಕ್ ಭಾಗವಹಿಸಿದ್ದ ಸಭೆಯಲ್ಲಿ ಈ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಇದರಲ್ಲಿ 8220.05 ಕೋಟಿ ರೂ. ಮೊತ್ತದ 6 ಹೊಸ ಯೋಜನೆಗಳು ಹಾಗೂ 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಸೇರಿವೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 2095 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಫೋನ್ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿದೆ.
ಹೊಸ ಹೂಡಿಕೆ
ರಾಜ್ಯದಲ್ಲಿ ಹೊಸದಾಗಿ ಒಟ್ಟು 6 ಕಂಪನಿಗಳು ಹೂಡಿಕೆ ಮಾಡಲಿವೆ. ಎಸ್‌ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜೆ¾ಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ… ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು 8220.05 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಅಂದಾಜಿಸಲಾಗಿದೆ.
ಹೆಚ್ಚುವರಿ ಹೂಡಿಕೆ
ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿ ಎಸ್‌ಎಸ್‌ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪರ್ವ ಪ್ರೈವೇಟ್ ಲಿಮಿಟೆಡ್ ), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‌ಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋರ್ಲಾ ಎನರ್ಜಿ ಪ್ರೈವೇಟ್ ಲಿಮಿಟೆಡ್ ), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನಾ#† ಲಿಮಿಟೆಡ್ ಮತ್ತು ಸ್ಪೈಡರ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು 9,615.85 ಕೋಟಿ ರೂ.ಗಳಷ್ಟಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.