ಹರ್ಷ ಹತ್ಯೆ ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ
Team Udayavani, May 12, 2022, 9:24 AM IST
ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹತ್ತು ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಈ ಕುರಿತಂತೆ ಎನ್‌ಐಎ ಪರ ವಕೀಲರು ಸಲ್ಲಿಸಿದ ಮನವಿಯನ್ನು ಬುಧವಾರ ಎನ್‌ಐಎ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಎನ್‌ಐಎ ಪರ ವಕೀಲರಾದ ಪಿ.ಪ್ರಸ ನ್ನಕುಮಾರ್, ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ಗುರುತು ಪತ್ತೆಯ ಪೆರೇಡ್ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೆ, ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ.
ಇದನ್ನೂ ಓದಿ:ದೇಶದ್ರೋಹ ಕಾಯ್ದೆಯೆಂದರೇನು? ಐಪಿಸಿ ವಿಧಿ 124ಎ ಏನು ಹೇಳುತ್ತೆ?
ಹೀಗಾಗಿ ಆರೋಪಿಗಳು ಬಳಸುತ್ತಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಸಿಡಿಆರ್ ವಿಶ್ಲೇಷಣೆ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಇನ್ನೂ ನಡೆಯಬೇಕಿದೆ. ಜತೆಗೆ ಹತ್ಯೆ ನಡೆಸಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸಲು ಹಣಕಾಸಿನ ನೆರವು ಯಾರಿಂದ ಪಡೆಯಲಾಯಿತು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ. ಹೀಗಾಗಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಕೋರಿದರು. ಅದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 180 ದಿನಗಳಿಗೆ ವಿಸ್ತರಿಸಿ ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.