ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ
Team Udayavani, Aug 1, 2021, 7:08 PM IST
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1875 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 25 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 1502 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2846244ಕ್ಕೆ ತಲುಪಿದೆ.
ಇಂದು ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 1.20 % ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.33% ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-13, ಬೆಳಗಾವಿ-39, ಬೆಂಗಳೂರು ಗ್ರಾಮಾಂತರ-37, ಬೆಂಗಳೂರು ನಗರ-409, ಬೀದರ್-1, ಚಾಮರಾಜನಗರ-33, ಚಿಕ್ಕಬಳ್ಳಾಪುರ-23, ಚಿಕ್ಕಮಗಳೂರು-65, ಚಿತ್ರದುರ್ಗ-32, ದಕ್ಷಿಣ ಕನ್ನಡ-410, ದಾವಣಗೆರೆ-17, ಧಾರವಾಡ-23, ಗದಗ-12, ಹಾಸನ-108, ಹಾವೇರಿ-2, ಕಲಬುರಗಿ-9, ಕೊಡಗು-83, ಕೋಲಾರ-35, ಕೊಪ್ಪಳ-1, ಮಂಡ್ಯ-42, ಮೈಸೂರು-146, ರಾಯಚೂರು-1, ರಾಮನಗರ-7, ಶಿವಮೊಗ್ಗ-65, ತಮಕೂರು-52, ಉಡುಪಿ-162, ಉತ್ತರ ಕನ್ನಡ-46, ವಿಜಯಪುರ-1, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.