ಬಿಜೆಪಿ ಕಾರ್ಯಕಾರಣಿ 2ನೇ ದಿನ: ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧ!
Team Udayavani, May 7, 2017, 9:25 AM IST
ಮೈಸೂರು: ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆಯೇ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದ್ದು, ಭಾನುವಾರದ 2 ನೇ ದಿನದ ಕಾರ್ಯಕಾರಿಣಿಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.
ಶನಿವಾರ ಮೊದಲ ದಿನದ ಕಾರ್ಯಕಾರಿಣಿಯ ಚಿತ್ರಣವನ್ನು ಎಳೆ ಎಳೆಯಾಗಿ ರಾಜ್ಯದ ಜನತೆಯ ಮುಂದೆ ಮಾಧ್ಯಮಗಳು ಬಿಚ್ಚಿಟ್ಟ ಹಿನ್ನಲೆಯಲ್ಲಿ ಪಕ್ಷ ಮುಜುಗರಕ್ಕೀಡಾಗಿತ್ತು, ಮಾತ್ರವಲ್ಲದೆ ಇಂದು ಭಿನ್ನಮತ ಹೊಂದಿರುವ ಕೆ.ಎಸ್.ಈಶ್ವರಪ್ಪ ಅವರು ಭಾಷಣ ಮಾಡಲಿರುವ ಹಿನ್ನಲೆಯಲ್ಲಿ ಏನು ಮಾತನಾಡುತ್ತಾರೋ ಎನ್ನುವ ಭಯದಲ್ಲಿ ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಮಾಧ್ಯಮ ಪ್ರತಿನಿಧಿಗಳು ಸಭೆ ನಡೆಯುತ್ತಿರುವ ಸ್ಥಳದ ಆವರಣ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದ್ದು, ಮಧ್ಯಾಹ್ನದ ಸುದ್ದಿಗೋಷ್ಠಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮಗಳ ಪ್ರತಿ ನಿಧಿಗಳಿಗೆ ಸ್ಪಷ್ಟ ಉತ್ತರ ನೀಡದೆ. ಈ ಬಗ್ಗೆ ಚರ್ಚಿಸುತ್ತೇನೆ , ತಪ್ಪು ಕಲ್ಪನೆ ಬೇಡ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.