Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
ಇಬ್ಬರು ಮಹಿಳಾ ಸಿಬಂದಿ ಸೇರಿ ಮೂವರಿಗೆ ಗಂಭೀರ ಗಾಯ
Team Udayavani, Nov 20, 2024, 12:54 AM IST
ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳಾ ಸಿಬಂದಿಯೊಬ್ಬರು ಸಜೀವ ಸುಟ್ಟು ಹೋಗಿರುವ ಹೃದಯ ವಿದ್ರಾವಕ ಘಟನೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಶ್ರೀರಾಮಪುರ ನಿವಾಸಿ ಪ್ರಿಯಾ (27) ಮೃತ ಯುವತಿ. ರಾಜಾಜಿನಗರದ ಡಾ| ರಾಜ್‌ಕುಮಾರ್ ರಸ್ತೆಯ ಮೈ ಇವಿ ಸ್ಟೋರ್ ಹೆಸರಿನ ಎಲೆಕ್ಟ್ರಿಕ್ ಬೈಕ್ ಮಳಿಗೆಯಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ.
25ಕ್ಕೂ ಅಧಿಕ ಎಲೆಕ್ಟ್ರಿಕ್ ಬೈಕ್‌ಗಳು ಹಾಗೂ ಪೀಠೊಪಕರಣಗಳು ಸುಟ್ಟು ಭಸ್ಮವಾಗಿವೆ. ಅಲ್ಲಿ ಕೆಲಸ ಮಾಡುತ್ತಿದ್ದ ದಿಲೀಪ್, ವೇದಾವತಿ ಸೇರಿ ಮೂವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡಕ್ಕೂ ಹಾನಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಸುಟ್ಟು ಕರಕಲಾದ ಯುವತಿ
ಮಳಿಗೆಯಲ್ಲಿ ಯುವತಿ ಸೇರಿ 7ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು. ಸಂಜೆ 6 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಶೋ ರೂಮ್‌ನ ಬ್ಯಾಟರಿ ಸೆಕ್ಷನ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಮೊದಲಿಗೆ ಬ್ಯಾಟರಿ ಸ್ಫೋಟಗೊಂಡಿತು. ಗಾಬರಿಗೊಂಡ ಯುವತಿ ಸೇರಿ ಎಲ್ಲಾ ಸಿಬಂದಿ ಹೊರಗಡೆ ಹೋಗಲು ಮುಂದಾದರು. ಆದರೆ ಯುವತಿ, ಬೆಂಕಿಯ ಕಿನ್ನಾಲಿಗೆಯಿಂದ ಪಾರಾಗಲು ಆಡಳಿತ ವಿಭಾಗದ ಕ್ಯಾಬಿನ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಇತರೆ ಸಿಬಂದಿ ಶೋರೂಮ್‌ನಿಂದಲೇ ಹೊರಗಡೆ ಹೋಗಿದ್ದಾರೆ. ಈ ವೇಳೆ ಕ್ಯಾಬಿನ್‌ಗೆ ಬ್ಯಾಟರಿಗಳ ಸ್ಫೋಟದಿಂದ ಗಾಜುಗಳು ಪುಡಿಯಾಗಿ ಬೆಂಕಿಯ ಕಿನ್ನಾಲಿಗೆ ಪ್ರಿಯಾಗೆ ತಗಲಿದೆ. ಪರಿಣಾಮ ಆಕೆ ಕೆಲವೇ ಕ್ಷಣಗಳಲ್ಲಿ ಸಜೀವ ದಹನವಾಗಿದ್ದಾರೆ.
ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬಂದಿ
ವಿಷಯ ತಿಳಿದು 2 ಅಗ್ನಿಶಾಮಕ ವಾಹನಗಳ ಜತೆ ಸ್ಥಳಕ್ಕೆ ಧಾವಿಸಿದ ಸಿಬಂದಿ ಬೆಂಕಿ ನಂದಿಸುತ್ತಿದ್ದರು.ಮತ್ತೊಂದೆಡೆ ರಾಜಾಜಿನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಘಟನಾ ಸ್ಥಳದ ಸುತ್ತ-ಮುತ್ತ ಜಮಾಯಿಸಿದ್ದ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಚದುರಿಸಿದರು. ಆದರೆ ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೊಂದು ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ಕರೆಸಿಕೊಂಡು ಸುಮಾರು 3 ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಇಂದು ಹುಟ್ಟುಹಬ್ಬ ಇತ್ತು: ತಂದೆ ಆಕ್ರಂದನ
ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾದ ಪ್ರಿಯಾ ಮೃತಪಟ್ಟ ಸುದ್ದಿ ಕೇಳಿ ಅವರ ತಂದೆ ಆರ್ಮುಗಂ ಶೋ ರೂಮ್ ಬಳಿ ಬಂದು ಪುತ್ರಿಗಾಗಿ ಗೋಳಾಡಿದರು. ಅವರ ಆಕ್ರಂದನ ಅಲ್ಲಿಂದ್ದವರ ಕಣ್ಣಾಲಿಗಳಲ್ಲಿ ನೀರು ತರಿಸಿತ್ತು.
ಭಾವುಕರಾಗಿಯೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರ್ಮುಗಂ, ಕಳೆದ 3 ವರ್ಷಗಳಿಂದ ಪುತ್ರಿ ಈ ಎಲೆಕ್ಟ್ರಿಕ್ ಶೋ ರೂಮ್‌ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಳು. ನ. 20ರಂದು ಪುತ್ರಿಯ ಹುಟ್ಟುಹಬ್ಬವಿತ್ತು. ಆಕೆಗಾಗಿ ಹೊಸ ಬಟ್ಟೆ ಕೂಡ ಖರೀದಿಸಿದ್ದೆವು. ಅದನ್ನು ಧರಿಸಲು ಆಕೆಯೇ ಇಲ್ಲ ಎಂದು ಆರ್ಮುಗಂ ಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.