CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್ ಜಪ್ತಿ!
Team Udayavani, Oct 19, 2024, 1:05 AM IST
ಬೆಂಗಳೂರು: ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ತರಿಸಿಕೊಂಡಿದ್ದ 21.17 ಕೋಟಿ ರೂ. ಮೌಲ್ಯದ ವಿವಿಧ ಮಾದರಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬಂದಿ ವಶಪಡಿಸಿಕೊಂಡಿದ್ದಾರೆ.
ಅಂಚೆ ಮುಖಾಂತರ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಪೊಲೀಸರು ನಿಗಾ ವಹಿಸಿದ್ದರು. ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿ, ಕೆಲವು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.
ಮುಂದುವರಿದ ಭಾಗವಾಗಿ ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ ಕಸ್ಟಮ್ಸ… ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಯು.ಎಸ್., ಯು.ಕೆ., ಬೆಲ್ಜಿಯಂ, ಥಾಯ್ಲೆಂಡ್, ನೇದರ್‌ಲ್ಯಾಂಡ್ ಇತರೆ ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಅನುಮಾನಾಸ್ಪದ ಪಾರ್ಸೆಲ್‌ಗಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲನೆ ನಡೆಸಿದ್ದರು. ಅವುಗಳ ಪೈಕಿ 606 ಪಾರ್ಸಲ್‌ಗಳಲ್ಲಿ ಡ್ರಗ್ಸ್ ಇರುವುದು ಖಚಿತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.