236 ನಗರದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ: 18 ಸಾವಿರ ಕೋಟಿ ರೂ.ಗಳ ಅವಶ್ಯಕತೆ: ಸಚಿವ ಬೈರತಿ
Team Udayavani, Mar 16, 2022, 5:30 AM IST
ಬೆಂಗಳೂರು:ರಾಜ್ಯದ ಸುಮಾರು 236 ನಗರ/ ಪಟ್ಟಣ ಸ್ಥಳೀಯ ಸಂಸ್ಥೆಗಳಿಗೆ ಒಳಚರಂಡಿ ವ್ಯವಸ್ಥೆಯೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ 314 ನಗರ/ ಪಟ್ಟಣ ಸ್ಥಳೀಯ ಸಂಸ್ಥೆಗಳಿದ್ದು, 78 ಸಂಸ್ಥೆಗಳಲ್ಲಿ ಮಾತ್ರ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ 236 ಕಡೆ ಈ ವ್ಯವಸ್ಥೆ ಅಳವಡಿಕೆಗೆ ಸುಮಾರು 18 ಸಾವಿರ ಕೋಟಿ ರೂ.ಗಳ ಆವಶ್ಯಕತೆ ಇದ್ದು, ಈ ಸಂಬಂಧ ಕೇಂದ್ರದ ಮೊರೆ ಹೋಗಿದ್ದೇವೆ ಎಂದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸ್ಥಳೀಯ ಸಂಸ್ಥೆಗಳಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಸಂಬಂಧ ಈಗಾಗಲೇ ಸಮಗ್ರ ಯೋಜನಾ ವರದಿ ಸಿದ್ಧಗೊಳಿಸಲಾಗಿದ್ದು, ಈ ಯೋಜನೆಗಾಗಿ 18 ಸಾವಿರ ಕೋಟಿ ರೂ. ಬೇಕಾಗುತ್ತದೆ. ಹಂತ-ಹಂತವಾಗಿ ಇದನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಈ ಮಧ್ಯೆ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಯೋಜನೆ ಅನುಷ್ಟಾನಕ್ಕೆ ಕ್ರಮ: ಕಾರಜೋಳ
ಅನುಷ್ಠಾನಕ್ಕೆ ಕ್ರಮ
ಸಾಮಾನ್ಯವಾಗಿ ಯಾವುದೇ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಮುನ್ನ ಸಂಬಂಧಪಟ್ಟ ನಗರ/ ಪಟ್ಟಣದ ನಕ್ಷೆ ಅನ್ವಯ ಮತ್ತು ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಮುಂದಿನ 25-30 ವರ್ಷಗಳಿಗೆ ಅಂದಾಜು ಲೆಕ್ಕ ಹಾಕಿ,
ಅದರ ಆಧಾರದ ಮೇಲೆ ಯೋಜನೆ ರೂಪಿಸಲಾಗುವುದು. ಆದರೆ, ರಾಜ್ಯದಲ್ಲಿ ನಗರೀಕರಣ ವೇಗವಾಗಿದ್ದು, ಜನಸಂಖ್ಯೆ ಹೆಚ್ಚಾಗುತ್ತಿದೆ. ಅದೇ ನಗರ/ ಪಟ್ಟಣಕ್ಕೆ ವಿವಿಧ ಹಂತಗಳಲ್ಲಿ ಒಳಚರಂಡಿ ಯೋಜನೆ ಅನುಷ್ಠಾನಗೊಳಿಸಬೇಕಿದೆ. ಸ್ಥಳೀಯ ಜನಪ್ರತಿನಿಧಿಗಳ ಕೋರಿಕೆ ಬಂದಲ್ಲಿ ಅಂದಾಜುಪಟ್ಟಿ ತಯಾರಿಸಿ, ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.