ಪ್ರವಾಹ ಹಾನಿ ತುಂಬಲು 2,400 ಕೋ. ರೂ. ಅಗತ್ಯ
Team Udayavani, Aug 11, 2021, 7:15 AM IST
ಬೆಂಗಳೂರು: ಪ್ರಸಕ್ತ ವರ್ಷ ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ದುರಸ್ತಿ ಮತ್ತು ಪುನರ್ ನಿರ್ಮಾಣಕ್ಕೆ 2,400 ಕೋ. ರೂ. ಎಂದು ಲೋಕೋಪಯೋಗಿ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ.
ಲೋಕೋಪಯೋಗಿ ಇಲಾಖೆ ಯಲ್ಲಿ ತುರ್ತು ಕಾರ್ಯಕ್ಕೆ ಅಗತ್ಯ ವಾದಷ್ಟು ಅನುದಾನ ಇಲ್ಲ. ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಹಣಕಾಸು ಹೊಂದಿಸುವ ಸವಾಲು ಎದುರಾಗಿದೆ. ಹೀಗಾಗಿ, ಹೆಚ್ಚುವರಿ ಅನುದಾನಕ್ಕೆ ಕೇಂದ್ರಕ್ಕೆ ಮೊರೆ ಹೋಗುವುದು ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿ ತತ್‌ಕ್ಷಣಕ್ಕೆ 3022.52 ಕಿ.ಮೀ. ರಸ್ತೆ, 671 ಸೇತುವೆ ಹಾಗೂ 97 ಕಟ್ಟಡಗಳಿಗೆ ಹಾನಿಯಾಗಿದೆ. ಲೋಕೋಪ ಯೋಗಿ ಇಲಾಖೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ್ದ ಅನುದಾನದ ಪೈಕಿ ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪ ಕಡಿತ ಉಂಟಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಈ ನಡುವೆ, ಇರುವ ಅನುದಾನ ದಲ್ಲಿ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಕಾರ್ಯ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಎಲ್ಲೆಲ್ಲಿ ಹಾನಿ :
ಪ್ರವಾಹದಿಂದ ಅತಿ ಹೆಚ್ಚು ಹಾನಿ ಗೊಳಗಾಗಿರುವ ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ 699.79 ಕಿ.ಮೀ. ರಾಜ್ಯ ಹೆದ್ದಾರಿ, 1780.57 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆ, ಎರಡನೇ ಕಲಬುರಗಿ, ಯಾದಗಿರಿ, ಬೀದರ್, ವಿಜಯ ನಗರ, ರಾಯಚೂರು ಜಿಲ್ಲೆಗಳಲ್ಲಿ 323 ಕಿ.ಮೀ. ರಾಜ್ಯ ಹೆದ್ದಾಗಿ, 449.03 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರಿನಲ್ಲಿ 278.76 ಕಿ.ಮೀ. ರಾಜ್ಯ ಹೆದ್ದಾಗಿ, 422.47 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆ, ಹಾಸನ ಮತ್ತು ಕೊಡಗಿನಲ್ಲಿ 101.38 ಕಿ.ಮೀ. ರಾಜ್ಯ ಹೆದ್ದಾರಿ, 162.35 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆಗಳಿಗೆ ಹಾನಿಯಾಗಿದೆ.
ಗದಗ, ವಿಜಯಪುರ, ಕಲಬುರಗಿ, ಬೆಳಗಾವಿ, ರಾಯಚೂರು, ಬಾಗಲ ಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಭಾಗದ 138.46 ಕಿ.ಮೀ. ರಾ.ಹೆ. ಹಾಗೂ ಆ ವ್ಯಾಪ್ತಿಗೆ ಬರುವ 11 ಸೇತುವೆಗಳ 9.94 ಕಿ.ಮೀ. ವ್ಯಾಪ್ತಿಯಲ್ಲಿ ಹಾನಿಯಾಗಿದೆ ಎನ್ನಲಾಗಿದೆ.
ಎಲ್ಲೆಲ್ಲಿ ಹೆಚ್ಚು ಹಾನಿ? : ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಲ್ಲಿ ಹೆಚ್ಚು ಹಾನಿ
ರಾಜ್ಯದಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ತತ್‌ಕ್ಷಣಕ್ಕೆ ಲಭ್ಯವಿರುವ ಅನುದಾನದಲ್ಲಿ ಕೆಲಸ ಪ್ರಾರಂಭಿಸಲು ತಿಳಿಸಲಾಗಿದೆ. – ಸಿ.ಸಿ.ಪಾಟೀಲ್, ಲೋಕೋಪಯೋಗಿ ಸಚಿವ
– ಎಸ್.ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು