ರಾಜ್ಯದಲ್ಲಿ ಒಂದೇ ದಿನ 248 ಮಂದಿಯಲ್ಲಿ ದೃಢಪಟ್ಟ ಕೋವಿಡ್-19 ಸೋಂಕು
Team Udayavani, May 29, 2020, 5:40 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಅತ್ಯಂತ ವೇಗದಲ್ಲಿ ಏರಿಕೆಯಾಗುತ್ತಿದೆ. ಇಂದಿನ ಸಂಜೆಯ ವರದಿಯಲ್ಲಿ ಮತ್ತೆ 70 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 248 ಮಂದಿಗೆ ಸೋಂಕು ದೃಢವಾಗಿದೆ.
ರಾಜ್ಯದ ಮೂರು ಜಿಲ್ಲೆಗಳಲ್ಲಿ ಇಂದು ಕೋವಿಡ್-19 ಸೋಂಕು ಸ್ಪೋಟವಾಗಿದೆ. ಕಲಬುರಗಿಯಲ್ಲಿ 61 ಪ್ರಕರಣ, ಯಾದಗಿರಿಯಲ್ಲಿ 60 ಪ್ರಕರಣ ಮತ್ತು ರಾಯಚೂರಿನಲ್ಲಿ 62 ಸೋಂಕು ಪ್ರಕರಣಗಳು ದೃಢವಾಗಿದೆ.
ಬೆಂಗಳೂರು ನಗರದಲ್ಲಿ 12 ಮಂದಿ, ಮಂಡ್ಯದಲ್ಲಿ ಇಬ್ಬರು, ಉಡುಪಿಯಲ್ಲಿ 15, ದಾವಣಗೆರೆ, ಹಾಸನ, ವಿಜಯಪುರದಲ್ಲಿ ತಲಾ ನಾಲ್ಕು, ಚಿಕ್ಕಬಳ್ಳಾಪುರದಲ್ಲಿ ಐದು, ಬಳ್ಳಾರಿ ಒಂಬತ್ತು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ಮೈಸೂರು, ತುಮಕೂರಿನಲ್ಲಿ ತಲಾ ಎರಡು, ಧಾರವಾಡ, ಚಿತ್ರದುರ್ಗ, ಶಿವಮೊಗ್ಗ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಯಲ್ಲಿ ತಲಾ ಒಂದು ಸೋಂಕು ಪ್ರಕರಣಗಳು ವರದಿಯಾಗಿದೆ.
ರಾಜ್ಯದಲ್ಲಿ ಮತ್ತೊಂದು ಸಾವಿನ ಪ್ರಕರಣ ವರದಿಯಾಗಿದ್ದು, ಮೇ.24ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ 50 ವರ್ಷದ ಮಹಿಳೆ ಗುರುವಾರ ಸಾವನ್ನಪ್ಪಿದ್ದಾರೆ. ಕೋವಿಡ್ ಪರೀಕ್ಷೆಯಲ್ಲಿ ಈಕೆಗೆ ಸೋಂಕು ತಾಗಿರುವುದು ದೃಢವಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ಇಂದು 60 ಮಂದಿ ಬಿಡುಗಡೆಯಾಗಿದ್ದು, ಒಟ್ಟು 894 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 48 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.