ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ
Team Udayavani, Apr 22, 2022, 7:00 AM IST
ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ (ಎ.22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಒಟ್ಟು 1,076 ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ.
ಈ ಬಾರಿ ವಿದ್ಯಾರ್ಥಿಗಳ ಜತೆಗೆ ಪರೀಕ್ಷಾ ಸಿಬಂದಿಗೂ ವಸ್ತ್ರ ಸಂಹಿತೆ ನಿಯಮ ಅನ್ವಯವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸರಳ ಉಡುಗೆಯಲ್ಲಿ ಬರಬೇಕು. ಧಾರ್ಮಿಕ ಉಡುಗೆ ತೊಡುಗೆಗಳನ್ನು ನಿಷೇಧಿಸಲಾಗಿದೆ ಎಂದು ಪಿಯು ಇಲಾಖೆ ತಿಳಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಪ್ರಶ್ನೆಪತ್ರಿಕೆಗಳನ್ನು ಇಡುವ ಖಜಾನೆಯ ಒಳಗೆ ಹಾಗೂ ಹೊರಗೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಅಕ್ರಮಗಳು ನಡೆದರೆ ಮಾಹಿತಿ ನೀಡಲು ಇಲಾಖೆಯು ಸಹಾಯವಾಣಿ 080-23080864 ತೆರೆಯಲಾಗಿದ್ದು, ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಕರೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.