ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಅಬ್ಬರ


Team Udayavani, Sep 26, 2017, 7:43 AM IST

26-STATE-3.jpg

ಬೆಂಗಳೂರು: ಕೇರಳ ಮತ್ತು ತಮಿಳುನಾಡು ಮಧ್ಯೆ ಗಾಳಿಯ ಒತ್ತಡದಲ್ಲಾದ ಬದಲಾವಣೆಯಿಂದ ಸೋಮವಾರ ರಾಜ್ಯಾದ್ಯಂತ ಮಳೆ ಅಬ್ಬರಿಸಿದ್ದು, ಇನ್ನೂ ಎರಡು-ಮೂರು ದಿನ ರಾಜ್ಯದ ಬಹುತೇಕ ಎಲ್ಲ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಮಧ್ಯೆ, ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ದಾವಣಗೆರೆಯಲ್ಲಿ ರಾಜ್ಯದಲ್ಲಿಯೇ ಅಧಿಕ, 13 ಸೆಂ.ಮೀ. ಮಳೆಯಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದ್ದು, ಕ್ರಮವಾಗಿ 102.9 ಮಿ.ಮೀ. ಹಾಗೂ 90 ಮಿ.ಮೀ.ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಒಟ್ಟಾರೆ ಮಳೆ ಹಂಚಿಕೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಅಧಿಕ ಮಳೆಯಾಗಿದೆ. ಧಾರವಾಡದಲ್ಲಿ 85 ಮಿ.ಮೀ., ಹಾವೇರಿಯಲ್ಲಿ 43, ಚಿತ್ರದುರ್ಗದಲ್ಲಿ 55.4, ಕೊಪ್ಪಳದಲ್ಲಿ 40.4, ಗದಗ 35.4, ಬೆಳಗಾವಿ 46.5, ಬಳ್ಳಾರಿ 29.2, ಕಲಬುರಗಿ 29, ರಾಯಚೂರು 20, ಬಾಗಲಕೋಟೆ 25.5 ಮಿ.ಮೀ. ಮಳೆಯಾಗಿದೆ. ಉಳಿದಂತೆ ಮಂಡ್ಯದಲ್ಲಿ 83, ದಕ್ಷಿಣ ಕನ್ನಡ 43, ಹಾಸನ 35.4, ಮೈಸೂರು 59, ಬೆಂಗಳೂರು ನಗರ ಮತ್ತು ಕೋಲಾರ 14.5, ಚಿಕ್ಕಮಗಳೂರು 32 ಮಿ.ಮೀ. ಮಳೆ ದಾಖಲಾಗಿದೆ. 

ಸೆ.26-30ರವರೆಗೆ ಭಾರಿ ಮಳೆ: ಗಾಳಿಯ ಒತ್ತಡದಲ್ಲಾದ ಬದಲಾವಣೆಯಿಂದ ಈ ಮಳೆ ಆಗುತ್ತಿದೆ. ಮುಂಗಾರು ಮಾರುತಗಳ ನಿರ್ಗಮನ ಹಾಗೂ ಹಿಂಗಾರು ಮಾರುತಗಳ ಆಗಮನದ ಸಂದರ್ಭಗಳಲ್ಲಿ ಈ ರೀತಿಯ ಬದಲಾವಣೆ ಸಾಮಾನ್ಯವಾಗಿ ಆಗುತ್ತದೆ. ಈ ವಾತಾವರಣ ಇನ್ನೂ ಎರಡು-ಮೂರು ದಿನ ಮುಂದುವರಿಯುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಸೆ.26ರಿಂದ 30ರವರೆಗೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿಯಲ್ಲಿ 26ರಿಂದ 28ರವರೆಗೆ ಭಾರಿ ಮಳೆ ಹಾಗೂ ಧಾರವಾಡ, ಕೊಪ್ಪಳ, ಗದಗದಲ್ಲಿ ಮಂಗಳವಾರ ಗುಡುಗುಸಹಿತ ಮಳೆಯಾಗಲಿದೆ. 

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ ಮತ್ತು ಕೊಡಗಿನಲ್ಲಿ ಭಾರಿ ಮಳೆ ಹಾಗೂ ಮುಂದಿನ 24 ಗಂಟೆ ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

ಸಿಡಿಲಿಗೆ ಮೂರು ಬಲಿ
ಶಿವಮೊಗ್ಗ/ನರಗುಂದ: ಸಿಡಿಲಬ್ಬರದ ಮಳೆಗೆ ರಾಜ್ಯದಲ್ಲಿ ಮೂವರು ಅಸುನೀಗಿದ್ದಾರೆ. ಶಿವಮೊಗ್ಗ ತಾಲೂಕಿನ ಬಸವಾಪುರದಲ್ಲಿ ಸೋಮವಾರ ಮಧ್ಯಾಹ್ನ ಸಿಡಿಲು ಬಡಿದು ಸಣ್ಣತಿಮ್ಮಾಭೋಮಿ (55) ಎಂಬುವರು ಮೃತಪಟ್ಟಿದ್ದಾರೆ. ಇವರ ಜೊತೆಗಿದ್ದ ಗಾಂಧಿನಗರ ನಿವಾಸಿಗಳಾದ ಪರಮೇಶಿ, ಯೋಗೀಶ್‌ ಹಾಗೂ ನಾಗಪ್ಪ ಎಂಬುವರು ಗಾಯಗೊಂಡಿದ್ದಾರೆ. ಹಸು ಹಾಗೂ ಕುರಿಗಳನ್ನು
ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿಯಿತು. ಈ ಮಧ್ಯೆ, ನರಗುಂದದ ವರ್ತಿ ಹಳ್ಳದ ಬಳಿ ಭಾನುವಾರ ಸ್ಥಳೀಯ ಸೋಮಾಪೂರ ಓಣಿಯ  ನಿವಾಸಿ ದೇವೇಂದ್ರಗೌಡ ರಾಜೇಂದ್ರಗೌಡ ಗೌಡ್ರ(64) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ.

ಹತ್ತಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿಯಿತು. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಮಂಗಲಗಿ ಗ್ರಾಪಂ ಮಾಜಿ ಅಧ್ಯಕ್ಷ ಸೂರ್ಯಕಾಂತ ರೇವಣಸಿದ್ದಪ್ಪ ಹೂಗಾರ (50) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇದೇ ವೇಳೆ, ಅವಿನಾಶ ಶಿವಪುತ್ರಪ್ಪ ಹೂಗಾರ(18) ಎಂಬುವರು ಗಾಯಗೊಂಡಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿಯಿತು.

ದಾವಣಗೆರೆ ಜಲಾವೃತ
ದಾವಣಗೆರೆ: ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವ 3 ಗಂಟೆ ವರೆಗೆ ಸುರಿದ ಮಳೆಗೆ ನಗರದ ತಗ್ಗು
ಪ್ರದೇಶಗಳೆಲ್ಲಾ ಜಲಾವೃತಗೊಂಡಿದ್ದು, 1000ಕ್ಕೂ ಅಧಿಕ ಮನೆಗಳು ಹಾನಿಗೊಳಗಾಗಿವೆ. ಎರಡು ಕಡೆಗಳಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದ್ದು, ಸಂತ್ರಸ್ತರಿಗೆ ನೆರವು ಒದಗಿಸಲಾಗಿದೆ.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.