KRS ಭರ್ತಿಗೆ 3 ಅಡಿ ಬಾಕಿ; 3 ಪ್ರಮುಖ ಅಣೆಕಟ್ಟು ವ್ಯಾಪ್ತಿಯಲ್ಲಿ ನೆರೆ ಭೀತಿ!
Team Udayavani, Jul 21, 2024, 6:20 AM IST
ಶ್ರೀರಂಗಪಟ್ಟಣ/ಹೊಸಪೇಟೆ/ವಿಜಯಪುರ: ನಿರಂತರ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ 3 ಪ್ರಮುಖ ಅಣೆಕಟ್ಟುಗಳಾಗಿರುವ ಕೆಆರ್‌ಎಸ್, ಆಲಮಟ್ಟಿ ಹಾಗೂ ತುಂಗಭದ್ರಾ ಜಲಾಶಯಗಳಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು, ಜಲಾಶಯಗಳು ತುಂಬಲು ಕೆಲವೇ ಅಡಿ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿಯಬಿಟ್ಟಿದ್ದು, ನದಿ ತೀರದ ಪ್ರದೇಶಗಳಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ.
ಜಲಾಶಯ ಭರ್ತಿ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುವುದರಿಂದ ನದಿ ತೀರದ ಪ್ರದೇ ಶ ಗ ಳಿಗೆ ಹಾನಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈಗಾ ಗಲೇ ಮೂರೂ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೀರಾ ವರಿ ಇಲಾಖೆ ಅಧಿಕಾರಿಗಳು ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕೆಆರ್‌ಎಸ್ ಜಲಾಶಯದಲ್ಲಿ ಶನಿವಾರ ನೀರಿನ ಸಂಗ್ರಹ 121 ಅಡಿ ದಾಟಿದ್ದು, ಡ್ಯಾಂನ 10 ಗೇಟ್ ಮೂಲಕ 15 ಸಾವಿರ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಜಲಾಶಯ ತುಂಬಲು ಇನ್ನು 3 ಅಡಿ ಮಾತ್ರ ಬಾಕಿಯಿದೆ. ಶನಿವಾರ 121 ಅಡಿ ದಾಟಿದ್ದು, 124 ಅಡಿ ದಾಟಿದ ಅನಂತರ ಹೆಚ್ಚು ನೀರನ್ನು ಬಿಟ್ಟರೆ ನದಿ ಪಾತ್ರದಲ್ಲಿರುವ ಗ್ರಾಮಸ್ಥರನ್ನು ತೆರವು ಮಾಡಲಾಗುತ್ತದೆ. ಅಣೆಕಟ್ಟೆಯಿಂದ 1ಲಕ್ಷಕ್ಕೂ ಹೆಚ್ಚು ನೀರನ್ನು ಬಿಟ್ಟರೆ ಕೆಲವು ಗ್ರಾಮಗಳು ಮತ್ತು ಕೃಷಿ ಪ್ರದೇಶಗಳಿಗೆ ಹಾನಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾ.ಪಂ. ಸಹಿತ ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಟಾಸ್ಕ್ಫೋರ್ಸ್ ರಚಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ| ಕುಮಾರ್ ತಿಳಿಸಿದ್ದಾರೆ.
ಟಿ.ಬಿ. ಡ್ಯಾಂ ಒಳಹರಿವು ಹೆಚ್ಚಳ
ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಸತತ ಮಳೆಯಾಗುತ್ತಿದ್ದು, ಒಳ ಹರಿವು 1.16 ಲಕ್ಷ ಕ್ಯುಸೆಕ್ ತಲುಪಿದೆ. ಜಲಾಶಯ 105.788 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 65.110 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ ಮಟ್ಟ 1,633.00 ಅಡಿ ಇದ್ದು, ಈಗ 1,621.32 ಅಡಿಯವರೆಗೆ ನೀರು ಬಂದಿದೆ. ಜಲಾಶಯದ ಒಳ ಹರಿವು ಆಧರಿಸಿ ಜಲಾಶಯದಿಂದ ನದಿಗೆ ನೀರು ಹರಿಸಲು ತುಂಗಭದ್ರಾ ಮಂಡಳಿ ಮುಂದಾಗಿದ್ದು ಈ ಸಂಬಂಧ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಂಡಿದೆ.
ಆಲಮಟ್ಟಿ ತೀರದ ಜನರಿಗೆ ಎಚ್ಚರಿಕೆ
ಆಲಮಟ್ಟಿ ಜಲಾಶಯಕ್ಕೆ ಶನಿವಾರ ಒಳಹರಿವು ಹೆಚ್ಚಿದೆ. ಪರಿಣಾಮ ಶನಿವಾರ ಮಧ್ಯಾಹ್ನದ ವೇಳೆಗೆ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ವಿಜಯಪುರ ಜಿಲ್ಲಾಡಳಿತ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.