ಪಾಲಿ(ಗೆ)ಕೆ ಫೈಟ್ : ಇಂದು ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಪ್ರಕಟ
Team Udayavani, Sep 6, 2021, 8:08 AM IST
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೂರು ಮಹಾನಗರ ಪಾಲಿಕೆಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾರು ವಿಜಯ ಮಾಲೆ ಧರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಆರಂಭವಾಗಲಿದ್ದು, ಪಾಲಿಕೆಯ ಗದ್ದುಗೆ ಏರೋದ್ಯಾರು ಅನ್ನೋ ಕುತೂಹಲ ಹೆಚ್ಚಾಗಿದೆ.
ಮಹಾನಗರ ಪಾಲಿಕೆಗಳ ವಿವರ
ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 58 ವಾರ್ಡ್ಗಳಲ್ಲಿ 585 ಅಭ್ಯರ್ಥಿಗಳು ಚುನಾವಣೆ ಎದುರಿಸಿದ್ದರು. ಬಿಜೆಪಿ – 55, ಕಾಂಗ್ರೆಸ್ – 45, ಜೆಡಿಎಸ್ – 11, ಎಂಇಎಸ್ – 21, ಎಎಪಿ – 27, ಪ್ರಜಾಕೀಯ – 1, ಎಐಎಂಐ- 7, ಎಸ್ಡಿಪಿಐ- 1, ಪಕ್ಷೇತರಾಗಿ 217 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಹುಬ್ಬಳ್ಳಿ – ಧಾರವಾಡ
ಅವಳಿ ನಗರಗಳಾದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 82 ವಾರ್ಡ್ಗಳಲ್ಲಿ 420 ಅಭ್ಯರ್ಥಿಗಳು ಚುನಾವಣೆಗೆ ನಿಂತಿದ್ದು, ಬಿಜೆಪಿ – 82, ಕಾಂಗ್ರೆಸ್ – 82, ಎಎಪಿ – 41, ಜೆಡಿಎಸ್ – 49, ಪ್ರಜಾಕೀಯ – 11, ಸಿ.ಪಿ.ಐ(ಎಂ) – 01, ಬಿಎಸ್ಪಿ – 07, ಕರ್ನಾಟಕ ರಾಷ್ಟ್ರ ಸಮಿತಿ – 04, ಎ.ಐ.ಎಂ.ಐ.ಎಂ – 12, ಎಸ್ಡಿಪಿಐ – 04, ಕರ್ನಾಟಕ ಶಿವಸೇನೆ – 04, ಕರ್ನಾಟಕ ಸೇವಾ ಪಾರ್ಟಿ – 01, ಹಾಗೂ 122 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಕಲಬುರಗಿ
ಈ ಮಹಾನಗರ ಪಾಲಿಕೆಯಲ್ಲಿ 55 ವಾರ್ಡ್ಗಳ ಪೈಕಿ 300 ಅಭ್ಯರ್ಥಿಗಳು ಚುನಾವಣೆ ಎದುರಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್-55, ಬಿಜೆಪಿ- 47, ಜೆಡಿಎಸ್- 46, ಆಮ್ ಆದ್ಮಿ – 26, ಬಿಎಸ್ ಪಿ- 6 ಹಾಗೂ 120 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಈ ಮೂರು ಮಹಾ ನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಈಗಾಗಲೇ ಶುರುವಾಗಿದ್ದು, ಯಾವ ಪಕ್ಷವು ವಿಜಯ ಮಾಲೆಗೆ ಕೊರಳೊಡ್ಡತ್ತದೆ ಎಂಬುದು ಇಂದೇ ನಿರ್ಧಾರವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.