Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ
Team Udayavani, Jul 1, 2024, 6:45 AM IST
ಬೆಂಗಳೂರು: ದೇಶದ ಹಳೇ ಕಾನೂನುಗಳಿಗೆ ಹೊಸ ಸ್ವರೂಪ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ(Central Govt)
ಮಹತ್ತರ ಬದಲಾವಣೆ ಮಾಡಿ ರೂಪಿಸಿರುವ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ (ಬಿಎಸ್‌ಎ) ಜುಲೈ 1ರಂದು ಅಧಿಕೃತವಾಗಿ ಜಾರಿ ಆಗಲಿವೆ.
ಹೊಸ ಕಾಯ್ದೆಗಳ ಬಗ್ಗೆ ಕಳೆದ ಒಂದೂವರೆ ತಿಂಗಳಿಂದ ಕಾನ್‌ಸ್ಟೆಬಲ್‌ನಿಂದ ಎಸ್‌ಪಿ/ಡಿಸಿಪಿ ಹಂತದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಹೊಸ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸುವಾಗ ಬಹಳ ಎಚ್ಚರವಹಿಸಬೇಕು. ಕಲಂಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಎಫ್ಐಆರ್‌ಗಳಲ್ಲಿ ಸೇರ್ಪಡೆ ಮಾಡಬೇಕು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಎಡೆಮಾಡಿಕೊಡಬಾರದು.
ಗೊಂದಲವಾದರೆ ಇಡೀ ಇಲಾಖೆಗೆ ಮುಜುಗರವಾಗುತ್ತದೆ. ಹಾಗೂ ಗೊಂದಲ ಉಂಟಾದರೆ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಲಹೆ ಮೇರೆಗೆ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸ್ ಐಟಿಯಲ್ಲೂ ಬದಲಾವಣೆ
ಹೊಸ ಕಾಯ್ದೆ-ಕಲಂಗಳು, ಎಫ್ಐಆರ್‌ನಲ್ಲಿ ಮಾತ್ರವ ಲ್ಲದೆ ಪೊಲೀಸ್ ಐಟಿಯಲ್ಲೂ ಬದಲಾವಣೆ ಆಗಿದೆ.
ಎಫ್ಐಆರ್ ಜತೆಗೆ ಇಲ್ಲಿಯೂ ಬಿಎನ್‌ಎಸ್, ಬಿಎನ್‌ಎಸ್‌ಎಸ್ ಮತ್ತು ಬಿಎಸ್‌ಎ ಕಾಯ್ದೆಗಳ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುವಂತೆ ಸಿದ್ಧಪಡಿಸಲಾಗಿದೆ.
ಬಿಎನ್‌ಎಸ್ ಕಾಯ್ದೆ
ಅನುಷ್ಠಾನ ಕುರಿತು ಈಗಾಗಲೇ ಇಲಾಖೆಯ ಎಲ್ಲ ಹಂತದ ಅಧಿಕಾರಿ-ಸಿಬಂದಿಗೆ ತರಬೇತಿ ನೀಡಲಾಗಿದೆ. ಮೈಸೂರು ಪೊಲೀಸ್ ಅಕಾಡೆಮಿ ಯಿಂದ ಕನ್ನಡದಲ್ಲೇ ಕೈಪಿಡಿಯನ್ನು ಸಿದ್ಧಪಡಿಸಿ ವಿತರಿಸಲಾಗಿದೆ. ಅದೇ ಪ್ರಕಾರ ಜುಲೈ 1ರಿಂದ ಠಾಣಾ ಪೊಲೀಸರು ಬಿಎನ್‌ಎಸ್ ಕಾಯ್ದೆಗಳನ್ನು ಉಲ್ಲೇಖಿಸಿ ಎಫ್ಐಆರ್ ದಾಖಲಿಸಿದ್ದಾರೆ.
– ಬಿ. ದಯಾನಂದ,
ನಗರ ಪೊಲೀಸ್ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.