Actor Darshan: ಜೈಲಿನಲ್ಲಿ ರಾಜಾರೋಷ; ದರ್ಶನ್ ಸೇರಿ ಹಲವರ ವಿರುದ್ಧ 3 ಪ್ರತ್ಯೇಕ FIR
Team Udayavani, Aug 26, 2024, 3:16 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ(Parappana Agrahara Prison) ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ರಾಜಾರೋಷವಾಗಿ ಜೈಲಿನಲ್ಲಿರುವ ಫೋಟೋ ,ವಿಡಿಯೋ ವೈರಲ್ ಆಗುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಜೈಲಿನಲ್ಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಒಂದು ಕೈಯಲ್ಲಿ ಸಿಗರೇಟ್ ಇನ್ನೊಂದು ಕೈಯಲ್ಲಿ ಕಾಫಿ ಕಪ್ ಹಿಡಿದುಕೊಂಡು ಇತರೆ ಆರೋಪಿಗಳೊಂದಿಗೆ ಜೈಲಿನ ಆವರಣದಲ್ಲಿ ಆರಾಮವಾಗಿ ದರ್ಶನ್ ಕೂತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಲೋಪವೆಸಗಿದ 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಈ ಫೋಟೋ ಹಾಗೂ ಸಿಗರೇಟ್ ವಿಚಾರಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿದೆ. ಜೈಲು ಅಧೀಕ್ಷರ ದೂರನ್ನು ಆಧರಿಸಿ ಮೂರು ಎಫ್ ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: Darshan Viral Photo: ದರ್ಶನ್ ಜೈಲಿನಲ್ಲಿನ ಸಿಗರೇಟ್ ಫೋಟೋ ಫೇಕ್.. ನಂದಕಿಶೋರ್
ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ನಾಗರಾಜ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಸಿಗರೇಟ್ ಕೊಟ್ಟಿದ್ದಕ್ಕೆ ಮೊದಲ ಎಫ್ ಐಆರ್ ದಾಖಲಾಗಿದ್ದು,ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ ಎರಡನೇ ಎಫ್ ಐಆರ್ ದಾಖಲಿಸಲಾಗಿದೆ. ಇನ್ನು ಮೂರನೇ ಎಫ್‌ಐಆರ್ ಸಿಸಿಬಿ ದಾಳಿ ವೇಳೆ ಬಾಕ್ಸ್ ತೆಗೆದುಕೊಂಡು ಹೋಗಿದ್ದಕ್ಕೆ ದಾಖಲಾಗಿದೆ.
ಮೂರು ಪ್ರಕರಣದಲ್ಲಿ ದರ್ಶನ್ ಅವರನ್ನು ಆರೋಪಿಯನ್ನಾಗಿ ಉಲ್ಲೇಖ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.