ಮಂಜೇಶ್ವರ ಗೋವಿಂದ ಪೈ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ 30 ಲಕ್ಷ ರೂ. ಧನ ಸಹಾಯ ಮಂಜೂರು
Team Udayavani, Aug 30, 2022, 6:39 PM IST
ಬೆಂಗಳೂರು: ಕನ್ನಡದ ಮೊದಲ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ 30 ಲಕ್ಷ ರೂ. ಧನ ಸಹಾಯ ಮಂಜೂರು ಮಾಡಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮಹತ್ವದ ಆದೇಶ ಪ್ರಕಟಿಸಿದೆ.
ಗೋವಿಂದ ಪೈ ಗಳ ಸಂಶೋಧನಾ ಸಂಪುಟ 1995 ರಲ್ಲಿ ಪ್ರಕಟವಾಗಿತ್ತು. ಇದಾಗಿ ಇಪ್ಪತೈದು ವರ್ಷಗಳು ಕಳೆದಿವೆ. ಸದ್ಯಕ್ಕೆ ಆ ಸಂಪುಟದ ಯಾವುದೇ ಪ್ರತಿಗಳು ಲಭ್ಯವಿರಲಿಲ್ಲ.
ಈ ಹಿನ್ನೆಲೆಯಲ್ಲಿ ಉಡುಪಿಯ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿಗಳು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಪತ್ರ ಬರೆದು ಧನ ಸಹಾಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ 30 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಮಂಜೇಶ್ವರ ಗೋವಿಂದ ಪೈಗಳು ಕನ್ನಡದ ಮೊದಲ ರಾಷ್ಟ್ರಕವಿ. ಇಪ್ಪತೈದು ವರ್ಷಗಳ ನಂತರ ಅವರ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕೆ ಸರಕಾರ ಧನಸಹಾಯ ಒದಗಿಸಿದೆ. ಇದರಿಂದ ಗೋವಿಂದ ಪೈಗಳ ಲೇಖನ ಸಂಪತ್ತು ಕನ್ನಡಿಗರನ್ನು ತಲುಪುವಂತಾಗಲಿ ಎಂದು ಆಶಿಸುತ್ತೇನೆ-ವಿ.ಸುನಿಲ್ ಕುಮಾರ್ ಕನ್ನಡ- ಸಂಸ್ಕ್ರತಿ ಹಾಗೂ ಇಂಧನ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.