ರಾಜ್ಯದಲ್ಲಿಂದು 300 ಕೋವಿಡ್ ಪಾಸಿಟಿವ್ ಪತ್ತೆ: ಓರ್ವ ವ್ಯಕ್ತಿ ಸಾವು
6 ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಹೆಚ್ಚಳ
Team Udayavani, Dec 19, 2021, 9:45 PM IST
ಬೆಂಗಳೂರು: ರಾಜ್ಯದಲ್ಲಿ ರವಿವಾರ 300ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಬೆಂಗಳೂರು ನಗರ, ದ.ಕ., ಮೈಸೂರು, ತುಮಕೂರು, ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸಕ್ರೀಯ ಪ್ರಕರಣ ಹೆಚ್ಚಳಗೊಂಡಿದೆ.
ರಾಜ್ಯದ ಒಟ್ಟು ಸಕ್ರೀಯ ಪ್ರಕರಣಗಳ ಶೇ.70ರಷ್ಟು ಬೆಂಗಳೂರಿನಲ್ಲಿದ್ದು, ಪ್ರಸ್ತುತ 5,660 ಸಕ್ರಿಯ ಪ್ರಕರಣಗಳಿವೆ.
ಕೊಡಗಿನಲ್ಲಿ 232, ದ.ಕ. 148, ಮೈಸೂರು 147, ತುಮಕೂರು 122, ಬಳ್ಳಾರಿ 105, ಶಿವಮೊಗ್ಗ 98, ಬೆಳಗಾವಿ 90, ಹಾಸನ 89, ಚಿಕ್ಕಮಗಳೂರು 88, ಉತ್ತರ ಕನ್ನಡದಲ್ಲಿ 61,ಮಂಡ್ಯ 36, ಚಿತ್ರದುರ್ಗಾ 34, ಉಡುಪಿ 34, ಬೆಂಗಳೂರು ಗ್ರಾಮಾಂತರ 31, ಧಾರವಾಡ 29, ಕೋಲಾರ 23, ಚಾಮರಾಜನಗರ 15, ದಾವಣಗೆರೆ 12, ಬಾಗಲಕೋಟೆ 5, ಕೊಪ್ಪಳ ಮತ್ತು ರಾಯಚೂರು ತಲಾ 10, ಕಲಬುರಗಿ 9, ರಾಮನಗರ 7, ಚಿಕ್ಕಬಳ್ಳಪರ ಹಾಗೂ ವಿಜಯಪುರ ತಲಾ 4, ಗದಗ ಮತ್ತು ಹಾವೇರಿ ತಲಾ 1 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಶೂನ್ಯ ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಅತ್ಯಧಿಕ ಪ್ರಕರಣ
ಡಿ.19ರಂದು ಬೆಂಗಳೂರು ನಗರ 168, ದ.ಕ. 37, ಮೈಸೂರು 13, ಹಾಸನ 11, ಕೊಡುಗು 10 ಪತ್ತೆಯಾಗಿದೆ. ಉಳಿದಂತೆ ಉತ್ತರ ಕನ್ನಡ, ಉಡುಪಿ, ತುಮಕೂರು, ಶಿವಮೊಗ್ಗ, ರಾಯಚೂರು, ಮಂಡ್ಯ, ಕೋಲಾರ, ಧಾರವಾಡ, ಚಿತ್ರದಯರ್ಗಾ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ , ಗದಗ, ಹಾವೇರಿ,ಕಲಬುರಗಿ, ಕೊಪ್ಪಳ, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ
ವಿದೇಶದಿಂದ 1,599 ಆಗಮನ
ಡಿ.19ರಂದು ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.0.26 ಹಾಗೂ ಸೋಂಕಿನಿಂದ ಮೃತಪಡುವರ ಪ್ರಮಾಣ ಶೇ.33ರಷ್ಟಿದೆ. ಡಿ.17, 18ರಂದು 1,599 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರವೇಶಿಸಿದ್ದಾರೆ. ರಾಜ್ಯಾದ್ಯಂತ ಒಟ್ಟು 7140 ಸಕ್ರಿಯ ಪ್ರಕರಣಗಳಿವೆ. 279ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.