Contractors ಬಾಕಿ 31,000 ಕೋಟಿ ರೂ. ಪಾವತಿಸದಿದ್ದರೆ ಪ್ರತಿಭಟನೆ
Team Udayavani, Oct 21, 2024, 11:18 PM IST
ಬೆಂಗಳೂರು: ಗುತ್ತಿಗೆದಾರರಿಗೆ ಸರಕಾರದ ವಿವಿಧ ಇಲಾಖೆಗಳಿಂದ ನೀಡಬೇಕಾದ 31 ಸಾವಿರ ಕೋಟಿ ರೂ. ಅನ್ನು ಸರಕಾರ ಈ ಕೂಡಲೇ ಪಾವತಿಸಲು ಮುಂದಾಗಬೇಕು. ಇಲ್ಲವಾದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಶನ್‌ನ ಅಧ್ಯಕ್ಷ ಜಗನ್ನಾಥ ಬಿ. ಶೇಗಜಿ ಎಚ್ಚರಿಸಿದರು.
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರವು ಸುಮಾರು 2 ವರ್ಷಗಳಿಂದ ಗುತ್ತಿಗೆದಾರರಿಗೆ ಪಾವತಿಸಬೇಕಾದ ಬಾಕಿ ಮೊತ್ತವನ್ನು ಉಳಿಸಿಕೊಂಡಿದೆ. ಇದನ್ನು ಹಂತ ಹಂತವಾಗಿಯಾದರೂ ಬಿಡುಗಡೆ ಮಾಡಬೇಕು ಎಂದರು.
ಒಂದು ತಿಂಗಳ ಗಡುವು
ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಮುಖ್ಯ ಮಂತ್ರಿಯವರನ್ನೂ ಸೇರಿದಂತೆ ವಿವಿಧ ಇಲಾಖೆಯ ಸಚಿವರನ್ನೂ ಹಲವು ಬಾರಿ ಭೇಟಿ ಮಾಡಿದ್ದೇವೆ. ಆದರೂ ಸರಕಾರ ನಮ್ಮೆಡೆಗೆ ಯಾವುದೇ ಗಮನ ಹರಿಸುತ್ತಿಲ್ಲ. ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಆರ್.ಡಿ.ಪಿ.ಆರ್ ಮತ್ತು ಬಿಬಿಎಂಪಿಗಳಿಂದ ಹೆಚ್ಚಿನ ಪಾವತಿ ಬಾಕಿ ಉಳಿದಿದೆ. ಇನ್ನು ಒಂದು ತಿಂಗಳ ಒಳಗಾಗಿ ಒಟ್ಟು ಬಾಕಿ ಮೊತ್ತದ ಕನಿಷ್ಠ ಶೇ .50ರಷ್ಟು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜತೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.