ಉಕ್ರೇನ್‌ನಲ್ಲಿ ಸಿಲುಕಿದ ರಾಜ್ಯದ 346 ವಿದ್ಯಾರ್ಥಿಗಳು
Team Udayavani, Feb 26, 2022, 7:45 AM IST
ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಇಲ್ಲಿಯವರೆಗೂ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರ ಮನೋಜ್ ರಂಜನ್ ತಿಳಿಸಿದ್ದಾರೆ.
ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, ಸಂಬಂಧಿಕರು, ಸ್ನೇಹಿತರ ಬಳಗದಿಂದ ಕರೆಗಳು ಬರುತ್ತಿವೆ. ಆ ಆಧಾರದಲ್ಲಿ ಉಕ್ರೇನ್‌ನಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬಹುದು ಎಂದು ಅಂದಾಜಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಿಂದ ತೆರಳಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವವರ ಸಹಾಯಕ್ಕಾಗಿ http://ukraine.karnataka.tech ಎಂಬ ವೆಬ್ ಪೋರ್ಟಲ್ ತೆರೆಯಲಾಗಿದೆ. ಸಂಬಂಧಪಟ್ಟವರು ಉಕ್ರೇನ್‌ನಲ್ಲಿ ಸಮಸ್ಯೆಗೆ ಸಿಲುಕಿರುವವರ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದ್ದಾರೆ.
346 ವಿದ್ಯಾರ್ಥಿಗಳು: ಪ್ರಮುಖವಾಗಿ ಬೆಂಗಳೂರಿನ 115, ಮೈಸೂರಿನ 30, ವಿಜಯಪುರದ 24, ಬಾಗಲಕೋಟೆಯ 22, ತುಮಕೂರಿನ 16, ಹಾವೇರಿಯ 14, ದಾವಣಗೆರೆ- 12, ಚಿಕ್ಕಮಗಳೂರು, ಹಾಸನ ಮತ್ತು ರಾಯಚೂರಿನ ತಲಾ 10 ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ತಲಾ 9, ಧಾರವಾಡ ಮತ್ತು ಉಡುಪಿಯ ತಲಾ 5, ಚಾಮರಾಜನಗರ, ಕೋಲಾರ ಮತ್ತು ಮಂಡ್ಯ ತಲಾ 4, ಬೀದರ್, ಚಿತ್ರದುರ್ಗ, ಶಿವಮೊಗ್ಗದ ತಲಾ 3, ರಾಮನಗರ ಮತ್ತು ಉತ್ತರ ಕನ್ನಡದ ತಲಾ ಇಬ್ಬರು, ಬೆಂ.ಗ್ರಾಮಾಂತರ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ತಲಾ ಒಬ್ಬರು ವಿದ್ಯಾರ್ಥಿಗಳ ಪರವಾಗಿ ಕರೆಗಳು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.