ಗುರು ರಾಯರ 346 ನೇ ಮಧ್ಯಾರಾಧನೆ:ಮಂತ್ರಾಲಯದಲ್ಲಿ ಭಕ್ತ ಸಾಗರ
Team Udayavani, Aug 9, 2017, 11:49 AM IST
ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 346ನೇ ಆರಾಧನೆ ಮಹೋತ್ಸವವನ್ನು ಬುಧವಾರ ಭಕ್ತಿ ಭಾವಗಳಿಂದ ಆಚರಿಸಲಾಗುತ್ತಿದ್ದು, ಶ್ರೀಮಠಕ್ಕೆ ಲಕ್ಷಾಂತರ ಭಕ್ತರು ಹರಿದು ಬಂದಿದ್ದಾರೆ.
ಶ್ರೀಗುರು ರಾಘವೇಂದ್ರರು ಸಶರೀರ ಬೃಂದಾವನಸ್ಥರಾಗಿ ಇಂದಿಗೆ 346 ವಸಂತಗಳು ತುಂಬಿರುವ ಗಳಿಗೆಯಲ್ಲಿ ಪುರೋಹಿತರು ರಾಯರ ಮೂಲ ವೃಂದಾವನಕ್ಕೆ ವಿಶೇಷ ಅಭಿಷೇಕಗಳನ್ನು ಮಾಡಿದರು. ತುಪ್ಪ, ಕ್ಷೀರ, ಒಣ ಹಣ್ಣುಗಳು ಮತ್ತು ಪಂಚಾಮೃತ ಅಭಿಷೇಕ ಮಾಡಲಾಯಿತು.
ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆಗಳನ್ನು ನೆರವೇರಿಸಿದರು. ಸಂಪ್ರದಾಯದಂತೆ ತಿರುಪತಿ ತಿರುಮಲ ದೇಗುಲದಿಂದ ವಿಶೇಷ ವಸ್ತ್ರವನ್ನು ಸಮರ್ಪಿಸಲಾಗಿದೆ.
ಮಠಕ್ಕೆ ಆಗಮಿಸಿರುವ ಅಸಂಖ್ಯ ಭಕ್ತರ ಅನುಕೂಲಕ್ಕಾಗಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ನದಿಯಲ್ಲಿ ನೀರಿಲ್ಲದ ಕಾರಣ ಸ್ನಾನಕ್ಕೆ ನದಿ ಪಾತ್ರದಲ್ಲಿ ಶವರ್‌ಗಳನ್ನು ನಿರ್ಮಿಸಲಾಗಿದೆ. ಆರೋಗ್ಯ, ವಸತಿ, ಸಾರಿಗೆ ಸೌಲಭ್ಯಕ್ಕೆ ಕುಂದುಂಟಾಗದಂತೆ ಸಕಲ ಸೌಕರ್ಯ ಕಲ್ಪಿಸಲಾಗಿದೆ.
ವಿವಿಧೆಡೆಗಳಿಂದ ಗಣ್ಯಾತೀಗಣ್ಯರು ಸೇರಿದಂತೆ 2 ಲಕ್ಷಕ್ಕೂ ಅಧಿಕ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ. ದೇಶದ ವಿವಿಧೆಡೆ ಏಕಕಾಲದಲ್ಲಿ ರಾಯರ ಆರಾಧನೆಯನ್ನು ವೈಭವದಿಂದ ನೆರವೇರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.