ಮೂರನೇ ಸರ್ಜಿಕಲ್ ಸ್ಟ್ರೈಕ್ ಆಗುತ್ತಾ?; ಗೃಹ ಸಚಿವರು ಹೇಳಿದ್ದೇನು?
Team Udayavani, Mar 9, 2019, 1:37 PM IST
ಮಂಗಳೂರು: ಮೂರನೇ ಸರ್ಜಿಕಲ್ ಸ್ಟ್ರೈಕ್ ನಡೆದಿದೆಯೆ? ನಡೆಯುತ್ತದೆಯೋ? ಹೌದು ಈ ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದ್ದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಡಿದ ಭಾಷಣ.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಉರಿ, ಬಾಲಕೋಟ್ ಸೇರಿದಂತೆ ಮೂರು ಬಾರಿ ಗಡಿ ದಾಟಿ ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿದೆ. ಉರಿ, ಬಾಲಕೋಟ್ ಬಗ್ಗೆ ನಿಮಗೆಲ್ಲಾ ಗೊತ್ತಿದೆ ಆದರೆ ಮೂರನೇ ಸ್ಟ್ರೈಕ್ ಬಗ್ಗೆ ನಾನು ಹೇಳಲಾರೆ ಎಂದು ತೀವ್ರ ಕುತೂಹಲ ಮೂಡಿಸಿದ್ದಾರೆ.
ಭಾರತ ಸಧೃಡ ರಾಷ್ಟ್ರವಾಗಿದ್ದು ವಿರೋಧಿಗಳಿಗೆ ತಕ್ಕ ತಿರುಗೇಟು ನೀಡುತ್ತದೆ. ನಾವು ಯಾರ ತಂಟೆಗೂ ಹೋಗಲ್ಲ. ನಮ್ಮ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದರು.
ಪಾಕಿಸ್ಥಾನದಲ್ಲಿ ಉಗ್ರರು ಸತ್ತರೆ ಇಲ್ಲಿ ಕೆಲವರಿಗೆ ನೋವಾಗುತ್ತದೆ ಎಂದು ವಿಪಕ್ಷಗಳ ವಿರುದ್ಧ ಕಿಡಿ ಕಾರಿದರು.
ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧವೂ ತೀವ್ರ ಕಿಡಿ ಕಾರಿದ ರಾಜನಾಥ್ ಸಿಂಗ್ ಅವರು ರಾಜ್ಯದಲ್ಲಿ ಕಿಚಡಿ ಸರ್ಕಾರವಿದೆ. ರೈತರ ಸಾಲ ಮನ್ನಾ ಇನ್ನೂ ಮಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.