ರೈತರ ನೆಮ್ಮದಿ ಕಸಿದ ಮುಂಗಾರು, ಹಿಂಗಾರು

ಎರಡೇ ತಿಂಗಳುಗಳಲ್ಲಿ 4 ಲಕ್ಷ ಹೆಕ್ಟೇರ್‌ ಬೆಳೆ ಹಾನಿ

Team Udayavani, Nov 17, 2021, 7:00 AM IST

ರೈತರ ನೆಮ್ಮದಿ ಕಸಿದ ಮುಂಗಾರು, ಹಿಂಗಾರು

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಎರಡೂ ಋತುಗಳು ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿವೆ ಎಂದರೆ ತಪ್ಪಾಗಲಾರದು. ಕೇವಲ ಎರಡು ತಿಂಗಳುಗಳಲ್ಲಿ ಸುಮಾರು ನಾಲ್ಕು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿದ್ದ ಬೆಳೆ ಹಾಳಾಗಿದೆ. ಲಕ್ಷಾಂತರ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಮುಂಗಾರಿನ ನಿರ್ಗಮನ ಮತ್ತು ಹಿಂಗಾರಿನ ಆಗಮನದ ಸೆಪ್ಟಂಬರ್‌ -ಅಕ್ಟೋಬರ್‌ನಲ್ಲಿ ಕ್ರಮವಾಗಿ 3.47 ಲಕ್ಷ ಹೆ. ಮತ್ತು 58 ಸಾವಿರ ಹೆ. ಪ್ರದೇಶದಲ್ಲಿ ಬೆಳೆಗಳು ಹಾನಿಗೀಡಾ ಗಿವೆ. ಸಾವಿರಾರು ಹೆಕ್ಟೇರ್‌ ತೋಟಗಾರಿಕೆ ಬೆಳೆಗಳು ಕೂಡ ಕೊಚ್ಚಿ ಹೋಗಿವೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ. ಕಳೆದ ವರ್ಷ ಕೊರೊನಾ ರೈತರ ಬದುಕನ್ನು “ಲಾಕ್‌’ ಮಾಡಿತ್ತು. ಈ ಸಲ ಮಳೆಯೇ ಬೆಳೆ ಕೈಗೆ ಸಿಗದಂತೆ ಮಾಡಿದೆ.

ಮಳೆಯಿಂದ ಹಾನಿಗೀಡಾದ ಒಟ್ಟು ನಾಲ್ಕು ಲಕ್ಷ ಹೆಕ್ಟೇರ್‌ಗಳಲ್ಲಿ ಅರ್ಧಕ್ಕರ್ಧ ಅಂದರೆ, ಎರಡು ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆದ ತೊಗರಿ ಬಾಧಿತವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ತೊಗರಿ ಬೆಳೆಯುವ ಕಲಬುರಗಿ, ಬೀದರ್‌, ವಿಜಯಪುರದ ರೈತರಿಗೆ ಅತಿವೃಷ್ಟಿ ಶಾಪವಾಗಿದೆ. ಉಳಿದಂತೆ 96 ಸಾವಿರ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಸೋಯಾ ಅವರೆ ಹಾಳಾಗಿದೆ. ಇದಲ್ಲದೆ ಕಬ್ಬು, ಉದ್ದು, ಹತ್ತಿ, ಸೂರ್ಯಕಾಂತಿ, ಮೆಕ್ಕೆಜೋಳ, ಸಜ್ಜೆ ಹಾಗೂ ತೋಟಗಾರಿಕೆ ಬೆಳೆಗಳಾದ ಟೊಮೆಟೊ, ಈರುಳ್ಳಿ ಮತ್ತಿತರ ಬೆಳೆಗಳಿಗೆ ಕೂಡ ಹಾನಿ ಉಂಟಾಗಿದೆ.

ನಷ್ಟದ ಪ್ರಮಾಣ ಇನ್ನೂ ತಿಳಿದುಬರಬೇಕಿದೆ. ಈ ಮಧ್ಯೆ ಮಳೆ ಮುಂದುವರಿದಿದೆ. ನಷ್ಟದ ಅಂದಾಜು ಮೊತ್ತ ಎಷ್ಟಾಗುತ್ತದೆ ಎಂಬುದನ್ನು ಲೆಕ್ಕಹಾಕಿ, ಇದರ ಪರಿಹಾರಕ್ಕಾಗಿ ಶೀಘ್ರ ಸರಕಾರವು ಕೇಂದ್ರಕ್ಕೆ ವರದಿ ಪ್ರಸ್ತಾವನೆ ಸಲ್ಲಿಸಲಿದೆ. ಕೇಂದ್ರದ ನಿಯಮಾವಳಿ ಪ್ರಕಾರ ಶೇ. 33ಕ್ಕಿಂತ ಹೆಚ್ಚು ಬೆಳೆಹಾನಿ ಆಗಿದ್ದರೆ ಮಾತ್ರ ಪರಿಗಣಿಸಲಾಗುತ್ತದೆ. ಇದನ್ನೂ ಲೆಕ್ಕ ಹಾಕಬೇಕಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ವಾಡಿಕೆಗಿಂತ ಹೆಚ್ಚು ಮಳೆ
ಸಾಮಾನ್ಯವಾಗಿ ನೈಋತ್ಯ ಮಾರುತಗಳ ಪರಿಣಾಮ ರಾಜ್ಯದಲ್ಲಿ ಹೆಚ್ಚಿರುತ್ತದೆ. ಆದರೆ ಈ ಸಲ ನೆರೆಯ ತಮಿಳು ನಾಡು ಮತ್ತು ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತ ಸಹಿತ ಹಲವು ಬೆಳವಣಿಗೆಗಳು ಕಂಡುಬಂದ ಪರಿಣಾಮ ವಾಡಿಕೆಗಿಂತ ಮಳೆ ಹೆಚ್ಚಾಗಿದೆ. ಅದರಲ್ಲೂ ದಕ್ಷಿಣ ಒಳನಾಡಿನಲ್ಲಿ ಇದರ ಪ್ರಭಾವ ಅಧಿಕವಾಗಿದೆ. ರಾಜ್ಯದಲ್ಲಿ ಇದುವರೆಗೆ ಹಿಂಗಾರಿನಲ್ಲಿ ವಾಡಿಕೆ ಮಳೆ 158.3 ಮಿ.ಮೀ. ಆದರೆ, ಬಿದ್ದಿರುವುದು 266.6 ಮಿ.ಮೀ. ಅಂದರೆ ಶೇ. 68ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ರೇಷ್ಮೆ ಮಾರುಕಟ್ಟೆ ವಾರಣಾಸಿಗೆ ವಿಸ್ತರಿಸುವ ಚಿಂತನೆ: ಡಾ| ನಾರಾಯಣ ಗೌಡ

ದಕ್ಷಿಣ ಒಳನಾಡಿನಲ್ಲಿ 175.9 ಮಿ.ಮೀ. ಆಗಬೇಕಿದ್ದ ಮಳೆ 377.9 ಮಿ.ಮೀ. ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಹಿಂಗಾರು ಮಳೆ ಪ್ರಭಾವ ತುಸು ಕಡಿಮೆ ಇದ್ದು, ವಾಡಿಕೆ 121.7 ಮಿ.ಮೀ. ಬದಲಿಗೆ 98.6 ಮಿ.ಮೀ. ಮಳೆಯಾಗಿದೆ. ಕರಾವಳಿಯಲ್ಲಿ 226.6 ಮಿ.ಮೀ. ವಾಡಿಕೆ ಮಳೆ ಇದ್ದು, 428.4 ಮಿ.ಮೀ. ಸುರಿದಿದೆ ಎಂದು ಇಲಾಖೆ ತಿಳಿಸಿದೆ.

ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ತುಮಕೂರು, ಶಿವಮೊಗ್ಗ ಸುತ್ತಮುತ್ತ ವಾಡಿಕೆಗಿಂತ ದುಪ್ಪಟ್ಟು ಮಳೆಯಾಗಿದೆ. ಹಾಗಾಗಿ, ಮಲೆನಾಡು ಮತ್ತು ಹಳೆಯ ಮೈಸೂರು ಭಾಗದ ತೋಟಗಾರಿಕೆ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದ್ದು, ಇದರ ಅಂದಾಜು ಲೆಕ್ಕಹಾಕುವ ಪ್ರಕ್ರಿಯೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ: 100 ಹೆಕ್ಟೇರ್‌ಗೂ ಮಿಕ್ಕಿ ಭತ್ತ ಕೃಷಿಗೆ ಹಾನಿ
ಉಡುಪಿ/ ಮಂಗಳೂರು: ನಿಯಮ ತಪ್ಪಿದ ಮಳೆಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ 100ಕ್ಕೂ ಹೆಚ್ಚು ಹೆಕ್ಟೇರ್‌ ಭತ್ತ ಕೃಷಿಗೆ ಹಾನಿಯಾಗಿದೆ. ಮಳೆ ಮುಂದುವರಿಯುತ್ತಿರುವು ದರಿಂದ ಇನ್ನಷ್ಟು ಹಾನಿ ಉಂಟಾಗುವ ಸಾಧ್ಯತೆ ಇದ್ದು, ಖಚಿತ ಅಂಕಿಅಂಶ, ಸ್ಪಷ್ಟ ಚಿತ್ರಣ ಇನ್ನಷ್ಟೇ ಸಿಗಬೇಕಿದೆ. ಜತೆಗೆ ರಬ್ಬರ್‌, ಕಾಳುಮೆಣಸು, ಒಂದನೇ ಕೊಯ್ಲಾಗಿ ಅಂಗಳದಲ್ಲಿ ಒಣಗಬೇಕಿದ್ದ ಅಡಿಕೆಗೂ ತೊಂದರೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಹೆಕ್ಟೇರ್‌ ಭತ್ತ ಕೃಷಿಗೆ ಹಾನಿಯಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 35,726 ಹೆ.ನಷ್ಟು ಭತ್ತದ ಕೃಷಿ ಮಾಡಲಾಗಿದ್ದು, 30 ಹೆ. ಭತ್ತ ಕೃಷಿಗೆ ಹಾನಿಯಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ. ಗದ್ದೆಗಳಲ್ಲಿ ನೀರು ನಿಂತಿದ್ದು, ಗೆಣಸು, ಉದ್ದು, ಎಳ್ಳು, ಹೆಸರು, ಮೆಣಸು ಮತ್ತಿತರ ಬೆಳೆಗಳನ್ನು ಬೆಳೆಸಲು ಸಾಧ್ಯವಾಗದ ಸ್ಥಿತಿ ಇದೆ.

ದ.ಕ.ದಲ್ಲಿ ನ. 10ರ ವರೆಗೆ 73ಕ್ಕೂ ಹೆಚ್ಚು ಹೆಕ್ಟೇರ್‌ ಭತ್ತ ಬೆಳೆಗೆ ಹಾನಿ ಯಾಗಿದೆ. ಕಟಾವಾದ ಭತ್ತ, ಬೈಹುಲ್ಲು ಕೊಳೆತು ನಾಶವಾಗಿದೆ. ಇಲ್ಲಿಯೂ ನಷ್ಟದ ಸ್ಪಷ್ಟ ಚಿತ್ರಣ ಇನ್ನಷ್ಟೇ ಲಭಿಸ ಬೇಕು. ಅಡಿಕೆ, ಕೊಕೊ, ಬಾಳೆ ಕೃಷಿಯೂ ಹಾನಿ ಅನುಭವಿಸಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.