ನೌಕರಿಯಲ್ಲಿ ವಿಕಲಚೇತನರಿಗೆ ಶೇ.4 ಮೀಸಲು
Team Udayavani, Dec 4, 2017, 9:07 AM IST
ಬೆಂಗಳೂರು: ವಿಕಲಚೇತನರಿಗೆ ಸರ್ಕಾರಿ ನೌಕರಿ ಎ ಮತ್ತು ಬಿ ವರ್ಗದಲ್ಲಿ ಶೇ.4ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದರು.
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನಗರದ ಫ್ರೀಡಂ ಪಾರ್ಕ್ ಪೀಪಲ್ ಪ್ಲಾಜಾದ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಎಲ್ಲರಿಗಾಗಿ ಸಮಾಜವನ್ನು ಸುಸ್ಥಿರ ಹಾಗೂ ಚೇತೋಹಾರಿಯಾಗಿ ಪರಿವರ್ತಿಸೋಣ’ ಎಂಬುದು ಈ ಬಾರಿಯ ಘೋಷ ವಾಕ್ಯವಾಗಿದೆ. ಸರ್ಕಾರಿ ನೌಕರಿಯಲ್ಲಿ ಈ ಹಿಂದೆ ಎ-ಬಿ ದರ್ಜೆಯಲ್ಲಿ ಶೇ.3 ಮತ್ತು ಸಿ-ಡಿ ದರ್ಜೆಯಲ್ಲಿ ಶೇ.5ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಇದೀಗ ಎ-ಬಿ ದರ್ಜೆಯಲ್ಲಿ ವಿಕಲಚೇತನರಿಗೆ ರಾಜ್ಯ ಸರ್ಕಾರ ಶೇ.4ರಷ್ಟು ಮೀಸಲಾತಿ ನೀಡಿದೆ ಎಂದು ಹೇಳಿದರು.
ವಿಕಲಚೇತನರ ಇಲಾಖೆಯಿಂದ 2014-15ನೇ ಸಾಲಿನಲ್ಲಿ ಸಾವಿರ ಮೋಟರ್ ತ್ರಿಚಕ್ರ ಸೈಕಲ್ ವಿತರಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಹೊಸ ನಿಯಮದಿಂದಾಗಿ ತ್ರಿಚಕ್ರ ಸೈಕಲ್‌ನ ಮೋಟರ್ ಸಾಮರ್ಥ್ಯ ಹೆಚ್ಚಿಸಬೇಕಾಯಿತು. 2016-17ನೇ ಸಾಲಿನ ಟಾಕಿಂಗ್ ಲ್ಯಾಪ್‌ಟಾಪ್ ಮತ್ತು ಮೋಟರ್ ಸೈಕಲ್‌ಗಳನ್ನು ಫಲಾನುಭವಿಗಳಿಗೆ ವಿತರಿಸುವಲ್ಲಿ ತಡವಾಗಿದ್ದು, ಕೆಲವೇ ದಿನಗಳಲ್ಲಿ ಹಂಚಿಕೆ ಮಾಡಲಾಗುವುದು ಎಂದರು.
ವಿಕಲಚೇತನರನ್ನು ಮದುವೆಯಾದರೆ ಸರ್ಕಾರ 50 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದೆ. ಇದೀಗ ಬೇಡಿಕೆಯ ಹಿನ್ನೆಲೆಯಲ್ಲಿ ಕಿವುಡರನ್ನು ಕಿವುಡರು, ಮಾತು ಬಾರದವರನ್ನು ಮಾತು ಬಾರದವರು ಮದುವೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅವರಿಗೂ ಕೂಡ 50 ಸಾವಿರ ರೂ. ಪ್ರೋತ್ಸಾಹ ಧನ ಒದಗಿಸಲಾಗುವುದು. ಅಲ್ಲದೇ ಅಂಧ ವ್ಯಕ್ತಿಯನ್ನು ಅಂಧ ಮಹಿಳೆಗೆ
ವಿವಾಹವಾಗಿ ಮಗುವಾದರೆ, ಎರಡು ವರ್ಷಗಳ ಕಾಲ ಆ ಮಗುವನ್ನು ಪೋಷಿಸಲು ನೆರವಾಗುವ ಪೋಷಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲಿದೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಬಿಬಿಎಂಪಿ ಸದಸ್ಯೆ ಲತಾ ನವೀನ್‌ಕುಮಾರ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ನಿರ್ದೇಶಕ ಸಿದ್ದರಾಜ್, ವಿಕಲನಚೇತರ ಪ್ರಶಸ್ತಿ ಆಯ್ಕೆ ಸಮಿತಿ
ಸದಸ್ಯರಾದ ಪುಟ್ಟಪ್ಪ, ಮುಕ್ತ ಮತ್ತಿತರರು ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಮಂದಿ ವಿಕಲಚೇತನರಿಗೆ ಹಾಗೂ ನಿಮ್ಹಾನ್ಸ್ ಸೇರಿ 10 ಸಂಸ್ಥೆಗಳಿಗೆ ಮತ್ತು 5 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವೇದಿಕೆ ಮುಂಭಾಗ ಪ್ರತಿಭಟನೆ
ವಿಕಲಚೇತನರಿಗೆ ಕೇವಲ 100 ಕಿ.ಮೀ. ಸಂಚರಿಸಲು ಬಸ್‌ಪಾಸ್ ನೀಡಲಾಗಿದೆ. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಇದು ನಿಗದಿಯಾಗಿದ್ದು, ನಂತರ ಪರಿಷ್ಕರಿಸಲಾಗಿಲ್ಲ. ಆದ್ದರಿಂದ ಕೂಡಲೇ 100 ಕಿ.ಮೀ. ಬದಲಿಗೆ 150 ಕಿ.ಮೀ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಕೆಲ ವಿಕಲಚೇತನರು ವೇದಿಕೆಯ ಮುಂಭಾಗವೇ ಪ್ರತಿಭಟನೆ ಆರಂಭಿಸಿದರು. ಇದರಿಂದ ಕೆಲ ಕಾಲ ಗೊಂದಲ
ಸೃಷ್ಟಿಯಾಗಿತ್ತು. ಸಚಿವೆ ಉಮಾಶ್ರೀ ಮನವಿಯನ್ನು ಇಲಾಖೆಗೆ ಸಲ್ಲಿಸಿ, ಕ್ರಮಕೈಗೊಳ್ಳುತ್ತೇವೆ ಎಂದರೂ ಪ್ರತಿಭಟನೆ
ಮುಂದುವರಿಸಿದಾಗ ಪೊಲೀಸರು ಅವರನ್ನು ಹೊರಗೆ ಕಳುಹಿಸಿದ ಘಟನೆಯೂ ನಡೆಯಿತು. ಇದೇ ವೇಳೆ ವಿಕಲಚೇತನ ಕ್ರೀಡಾಪಟುಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.
2016-17ನೇ ಸಾಲಿನಲ್ಲಿ ಎರಡು ಸಾವಿರವಿದ್ದ ವಿಕಲಚೇತರನ ಮೋಟರ್ ಸೈಕಲ್ ಗಳನ್ನು 2017-18ನೇ ಸಾಲಿನಲ್ಲಿ
4 ಸಾವಿರಕ್ಕೆ ಏರಿಕೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ ಸುಮಾರು 28 ಕೋಟಿ ರೂ.ಗಳನ್ನು ಖರ್ಚು ಮಾಡಲಿದ್ದು, ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು.
●ಉಮಾಶ್ರೀ, ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.