Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ
ಸಮಿತಿಯಲ್ಲಿ ನಟ ರವಿಚಂದ್ರನ್, ಹಂಸಲೇಖ ಸೇರಿ ಹಲವರು
Team Udayavani, Oct 6, 2024, 6:30 AM IST
ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರಕಾರ ಸಿದ್ಧವಾಗುತ್ತಿದೆ. ಇದೇ ವೇಳೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರಕಾರ ಸಲಹಾ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇತೃತ್ವದ ಸಲಹಾ ಸಮಿತಿಯು 36 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿದೆ.
ಚಲನಚಿತ್ರ ರಂಗದಿಂದ ಖ್ಯಾತ ಸಾಹಿತಿ ಮತ್ತು ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ನಟ ರವಿಚಂದ್ರನ್ ಅವರು ಸಲಹಾ ಸಮಿತಿಯಲ್ಲಿದ್ದಾರೆ. ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಡಾ| ಸಿ.ಎಸ್. ದ್ವಾರಕನಾಥ್, ಹಿರೇಮಗಳೂರು ಕಣ್ಣನ್, ರಂಗ ನಿರ್ದೇಶಕ ಬಸವಲಿಂಗಯ್ಯ, ಪ್ರೊ| ರಾಧಾಕೃಷ್ಣ, ನಾಗೇಶ್ ಹೆಗಡೆ, ರಂಜಾನ್ ದರ್ಗಾ ಸೇರಿ ಹಲವು ಸಾಧಕರು ಸಲಹಾ ಸಮಿತಿಯಲ್ಲಿದಿದ್ದಾರೆ.
ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್ ಮೂಲಕ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಅವಕಾಶ ನೀಡಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಚಿವ ತಂಗಡಗಿ ನೇತೃತ್ವದ ಈ ಸಲಹಾ ಸಮಿತಿ ಮುಂದಿನ ವಾರದಿಂದಲೇ ಪರಿಶೀಲನೆ ನಡೆಸಲಿದೆ. 69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.