ದ.ಕನ್ನಡ ಜಿಲ್ಲೆಗೆ ಶೀಘ್ರ 15 ಆ್ಯಂಬುಲೆನ್ಸ್ ಮಂಜೂರು: ಡಿಸಿಎಂ ಅಶ್ವಥ್ ನಾರಾಯಣ
Team Udayavani, Jul 17, 2020, 5:06 PM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜಿಲ್ಲೆಯಲ್ಲಿ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಲು 25,000 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಗಳನ್ನು ಕೂಡಲೇ ಸರಬರಾಜು ಮಾಡಲಾಗುವುದು ಹಾಗೂ 15 ಆಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಕುರಿತು, ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಇಂದು ಡಿಸಿಎಂ ಅಶ್ವತ್ ನಾರಾಯಣ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತುರ್ತು ಸಭೆ ನಡೆಸಿದರು.
ಸಭೆಯ ನಂತರ ದ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಹಾಗೂ ಶಾಸಕರುಗಳಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಯು.ಟಿ.ಖಾದರ್ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು.
ಕೋವಿಡ್-19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.
ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಡಿಸಿಎಂ, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.