ವಿಠ್ಠಲನ ಪಾದ ಸೇರಿದ ಐವರು ಯಾತ್ರಿಕರು
Team Udayavani, Nov 9, 2019, 3:02 AM IST
ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ತಾಲೂಕಿನ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ಬಳಿ ದುರ್ಘಟನೆ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ಕೃಷ್ಣಾ ವಾಮನ ಕಣಬರಕರ (50), ಮಹಾದೇವ ಮಲ್ಲಪ್ಪ ಕಣಬರಕರ (48), ಲಕ್ಷ್ಮಣ ಅಂಬೇವಾಡಿಕರ (50), ಅರುಣ ದತ್ತಾ ಮುತಗೇಕರ (38) ಹಾಗೂ ಹಂಗರಗಾ ಗ್ರಾಮದ ಟೆಂಪೋ ಚಾಲಕ ಅದಾ ದೇವಪ್ಪ ಪಾಟೀಲ(44) ಮೃತರು. ಇತರ ಏಳು ಜನ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿ ವರ್ಷದಂತೆ ಕಾರ್ತಿಕ ಏಕಾದಶಿಗೆ ಪಂಢರಪುರಕ್ಕೆ ಈ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಾರೆ. ಮಂಡೋಳಿಯಿಂದ ಗುರುವಾರ ರಾತ್ರಿ ಟೆಂಪೋ ವಾಹನ ಹೊರಟಿತ್ತು. ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ಬಳಿ ನಸುಕಿನ ಜಾವ 4 ಗಂಟೆ ಸುಮಾರಿಗೆ ಇಟ್ಟಿಗೆ ತುಂಬಿಕೊಂಡು ಹೊರಟ ಟ್ರಾಕ್ಟರ್‌ಗೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದೊಳಗೆ ಸಿಕ್ಕಿ ಹಾಕಿಕೊಂಡಿದ್ದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.
ತಕ್ಷಣ ಸ್ಪಂದಿಸಿದ ಹೆಬ್ಬಾಳಕರ: ಅಪಘಾತ ಸಂಭವಿಸುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಸೊಲ್ಲಾಪುರದ ಶಾಸಕಿ ಪ್ರಣತಿ ಶಿಂಧೆ ಹಾಗೂ ಕೊಲ್ಲಾಪುರ ಶಾಸಕ ಬಂಟಿ ಪಾಟೀಲ ಅವರಿಗೆ ಕರೆ ಮಾಡಿ, ಮಾಹಿತಿ ಕಲೆ ಹಾಕಿ, ಸಹಾಯ ಕೋರಿದರು. ಶಾಸಕಿ ಶಿಂಧೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಎಲ್ಲ ವ್ಯವಸ್ಥೆ ಮಾಡಿ ಮೃತದೇಹಗಳನ್ನು ಊರಿಗೆ ತರಲಾಗಿದೆ ಎಂದು ಶಾಸಕಿ ಹೆಬ್ಬಾಳಕರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.