ಕನ್ನಡದ 51 ಕವನಗಳು ನೇಪಾಳಿ ಭಾಷೆಗೆ ತರ್ಜುಮೆ: ಮನು ಬಳಿಗಾರ್
Team Udayavani, Aug 19, 2019, 3:03 AM IST
ಕೋಲಾರ: ಕನ್ನಡದ ಹೆಸರಾಂತ ಕವಿಗಳ 51 ಕವನಗಳನ್ನು ನೇಪಾಳಿ ಭಾಷೆಗೆ ಅನುವಾದಿಸಿ “ಭಾರತ್ ಶಾಶ್ವತ್ ಆವಾಜ್’ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ ಅವರು, “ಉದಯವಾಣಿ’ ಜತೆ ಮಾತನಾಡಿದರು. ಕುವೆಂಪು, ಬೇಂದ್ರೆಯಂತ ಹೆಸರಾಂತ ಕವಿಗಳ 51 ಕನ್ನಡ ಕವನಗಳು ನೇಪಾಳಿ ಭಾಷೆಯಲ್ಲಿ ಈಗಾಗಲೇ ಅನುವಾದಗೊಂಡಿದೆ.
ಹಾಗೆಯೇ ನೇಪಾಳಿ ಭಾಷೆಯ 50 ಕವನಗಳನ್ನು ಆಧುನಿಕ ನೇಪಾಳಿ ಕವನಗಳು ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಲಾಗಿದ್ದು, ಬಿಡುಗಡೆಗೆ ಕಾಯಲಾಗುತ್ತಿದೆ. ಬಹ್ರೇನ್ ಕನ್ನಡಿಗರು ಅಲ್ಲಿ ಕನ್ನಡ ಭವನವೊಂದನ್ನು ನಿರ್ಮಿಸಲು ಮುಂದಾಗಿದ್ದು, ಕನ್ನಡ ಸಾಹಿತ್ಯ ಪರಿಷತ್‌ನಿಂದ 25 ಲಕ್ಷ ರೂ.ನೀಡಲು ಕೋಲಾರದಲ್ಲಿ ನಡೆದ ಕಾರ್ಯ ಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಲ್ಲಿ ನಿರ್ಮಾಣವಾಗುವ ಸಭಾಂಗಣಕ್ಕೆ ಕನ್ನಡ ಸಾಹಿತ್ಯ ಪರಿಷತ್ ಭವನವೆಂದೇ ನಾಮಕರಣ ಮಾಡಲು ಕೋರಲಾಗಿದೆ. ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಮಾಹಿತಿ ನೀಡುವ ಸಲುವಾಗಿ “ಉದ್ಯೋಗ’ ಹೆಸರಿನ ಪೋರ್ಟಲ್ ಆರಂಭಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.