Dengue Cases ರಾಜ್ಯದಲ್ಲಿ 5374 ಡೆಂಗ್ಯೂ ಕೇಸ್, 5 ಸಾವು
ಅಗತ್ಯ ಲಸಿಕೆ, ಪ್ಲೇಟ್‌ಲೆಟ್ಸ್ ಸಂಗ್ರಹಿಸಿಡಲು ಸೂಚನೆ
Team Udayavani, Jun 26, 2024, 7:20 AM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಿದ್ದು ಚಿಕಿತ್ಸೆಗೆ ಅಗತ್ಯವಿರುವ ಲಸಿಕೆ, ಪ್ಲೇಟ್‌ಲೆಟ್ಸ್‌ಗಳನ್ನು ಸಂಗ್ರಹಿಸಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯಾಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿ ಮಾತನಾಡಿದ ಅವರು, ಜೂ. 24ರ ವರೆಗೆ 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.
ಮರಣ ಪ್ರಮಾಣ ಶೇ.0.09
ಕೇಂದ್ರ ಆರೋಗ್ಯ ಇಲಾಖೆಯು ಡೆಂಗ್ಯೂ ಪ್ರಕರಣಗಳ ಮರಣ ಪ್ರಮಾಣ ಶೇ. 0.5ನ್ನು ಮೀರುವಂತಿಲ್ಲ ಎಂದಿದೆ. ಆದರೆ ರಾಜ್ಯದಲ್ಲಿ ಮರಣ ಪ್ರಮಾಣ ಶೇ. 0.09ರಷ್ಟಿದೆ. ಇದು ಏರಿಕೆಯಾಗದಂತೆ ನೋಡಿಕೊಳ್ಳಬೇಕಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದರು.
ರಾಜ್ಯದಲ್ಲಿ ಪ್ರತೀ ಶುಕ್ರವಾರ ರೋಗ ಹರಡುವ ಮೂಲ ಪತ್ತೆ ಮತ್ತು ನಾಶ ವಿಶೇಷ ಅಭಿಯಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಪರೀಕ್ಷೆ ಕಡಿಮೆ ಮಾಡಬೇಡಿ
ಡೆಂಗ್ಯೂ ಪರೀಕ್ಷೆಯ ಪ್ರಮಾಣ ಕಡಿಮೆ ಮಾಡುವುದು ಬೇಡ. ಹೆಚ್ಚು ಮಾಡಿದಂತೆ ಪ್ರಕರಣಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದು. ಡೆಂಗ್ಯೂಗೆ ಕಾರಣವಾಗುವ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್ನೆಸೆಸ್ ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.