60,939 ಕೋಟಿ ರೂ. ರಸಗೊಬ್ಬರ ಸಬ್ಸಿಡಿ: ಸಂಸದ ಈರಣ್ಣ ಕಡಾಡಿ ಸ್ವಾಗತ
Team Udayavani, Apr 28, 2022, 6:28 PM IST
ಬೆಂಗಳೂರು: ರಷ್ಯಾ ಮತ್ತು ಉಕ್ರೇನ್ ಯುದ್ದದ ಕಾರಣದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಕೊರತೆಯುಂಟಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಮನಗಂಡು ಪ್ರಸಕ್ತ ವರ್ಷದ ಖಾರಿಫ್ ಋತುವಿಗೆ ಸಬ್ಸಿಡಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ.
ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, ಇದರಿಂದ ರಸಗೊಬ್ಬರದ ಬೆಲೆ ಏರಿಕೆಯ ಭಾರವನ್ನು ತಡೆಯಲು ಸಾಧ್ಯವಿದೆ ಎಂದಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳುಗಳಿಗೆ (ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ) ಡಿಎಪಿ ಸೇರಿದಂತೆ ಫಾಸ್ಟೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ 60,939 ಕೋಟಿ ರೂ. ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕಳೆದ ಹಣಕಾಸು ವರ್ಷದಲ್ಲಿ 57,150 ಕೋಟಿ ರೂ.ಗಳ ಸಬ್ಸಿಡಿ ನೀಡಲಾಗಿತ್ತು. ಡಿಎಪಿ ಮೇಲಿನ ಸಬ್ಸಿಡಿಯನ್ನು ಪ್ರತಿ ಚೀಲಕ್ಕೆ 2,501 ರೂ.ಗೆ ಹೆಚ್ಚಿಸಲಾಗಿದ್ದು, 1,350 ರೂ ನೀಡಿ ರೈತರು 1 ಚೀಲ ಡಿಎಪಿ ಪಡೆಯಬಹುದು. ಕಳೆದ ವರ್ಷ ಡಿಎಪಿಗೆ 512 ರೂ ಸಬ್ಸಿಡಿ ನೀಡಲಾಗಿತ್ತು, ರೈತರಿಗೆ ಬೆಲೆ ಏರಿಕೆಯ ಬಿಸಿ ತಟ್ಟದಂತೆ ಕೈಗೆಟಕುವ ದರದಲ್ಲಿ ರಸಗೊಬ್ಬರ ಒದಗಿಸುವುದಕ್ಕೆ ಇದು ನೆರವಾಗಲಿದೆ ಎಂದು ಅವರು ವಿವರಿಸಿದ್ದಾರೆ.
ರೈತರ ಸಂಕಷ್ಟ ಸಮಯದಲ್ಲಿ ಇಂತಹ ದಿಟ್ಟ ಕ್ರಮ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.