650 ಯುಜಿ, 216 ಪಿಜಿ ವೈದ್ಯಕೀಯ ಸೀಟು ಹೆಚ್ಚಳ


Team Udayavani, Sep 30, 2022, 10:30 PM IST

650 ಯುಜಿ, 216 ಪಿಜಿ ವೈದ್ಯಕೀಯ ಸೀಟು ಹೆಚ್ಚಳ

ಬೆಂಗಳೂರು: ಕಳೆದ ವರ್ಷಕ್ಕಿಂತ ಈ ಬಾರಿ 650 ಸ್ನಾತಕ ಮತ್ತು 216 ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಹೆಚ್ಚುವರಿಯಾಗಿ ಲಭ್ಯವಾಗಲಿವೆ. ಒಟ್ಟಾರೆಯಾಗಿ ವೈದ್ಯಕೀಯ ಪದವಿಯಲ್ಲಿ 10,795 ಮತ್ತು ಸ್ನಾತಕೋತ್ತರ ಪದವಿಗೆ 5,360 ಸೀಟುಗಳು ಹೆಚ್ಚುವರಿ ಲಭ್ಯವಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ರಾಜ್ಯ ಸರಕಾರ ಈಗಾಗಲೇ ತಿಳಿಸಿರುವಂತೆ ಈ ವರ್ಷದಿಂದ ಆರಂಭವಾಗಿರುವ ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ಕಾಲೇಜುಗಳಲ್ಲಿ ತಲಾ 150 ಸೀಟುಗಳು ಲಭ್ಯವಾಗಲಿವೆ. ಜತೆಗೆ ಇತರ ಖಾಸಗಿ ಕಾಲೇಜುಗಳು ತನ್ನ ಇನ್‌ಟೇಕ್‌ (ಸೀಟು) ಹೆಚ್ಚಿಸಿದ್ದು, ಅದರಲ್ಲಿ 200 ಸೀಟುಗಳು ದೊರೆಯಲಿದ್ದು, ಒಟ್ಟಾರೆ 650 ಸೀಟುಗಳು ಹೆಚ್ಚಳವಾಗಿವೆ. ಸ್ನಾತಕೋತ್ತರ ಪದವಿಯಲ್ಲಿ 216 ಸೀಟುಗಳು ಹೆಚ್ಚುವರಿಯಾಗಿ ದೊರೆಯುತ್ತಿವೆ.

ಅಂತಿಮವಾಗದ ಶೇ.10 ಶುಲ್ಕ ಹೆಚ್ಚಳ
ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.10 ಶುಲ್ಕ ಹೆಚ್ಚಳ ಸಂಬಂಧ ಶುಕ್ರವಾರ ಖಾಸಗಿ ಕಾಲೇಜುಗಳು ಮತ್ತು ಸರಕಾರ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು. ಆದರೆ ಸರಕಾರ ಮತ್ತು ಖಾಸಗಿ ಕಾಲೇಜುಗಳು ಇನ್ನೂ ಒಮ್ಮತಕ್ಕೆ ಬಾರದ ಕಾರಣ ಸಹಿಯಾಗಿಲ್ಲ. ಖಾಸಗಿ ಕಾಲೇಜುಗಳು ಶೇ.15 ಹೆಚ್ಚಳಕ್ಕೆ ಪಟ್ಟು ಹಿಡಿದಿರುವ ಕಾರಣ ವಿಳಂಬವಾಗುತ್ತಿದೆ. ಹೀಗಾಗಿ ಶುಲ್ಕ ವಿಚಾರವಾಗಿ ಹಗ್ಗಜಗ್ಗಾಟ ಮುಂದುವರಿದಿದೆ.

ಇಂದು ಪಿಜಿಇಟಿ ದಾಖಲಾತಿ ಪರಿಶೀಲನೆ
ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿ ಈ ವರೆಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳದ ವಿದ್ಯಾರ್ಥಿಗಳಿಗಾಗಿ ದಿನಾಂಕವನ್ನು ವಿಸ್ತರಿಸಿದೆ. ಅ.1 ಮತ್ತು 3ರಂದು ಕೆಇಎ ಬೆಂಗಳೂರು ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4.15ರ ವರೆಗೆ ದಾಖಲಾತಿ ಪರಿಶೀಲನೆ ನಡೆಸಲಿದೆ ಎಂದು ಕೆಇಎ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.