![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 7, 2022, 10:00 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 68 ಎಥೆನಾಲ್ ಘಟಕಗಳನ್ನು ಸ್ಥಾಪಿಸಲು ಮತ್ತು ಪ್ರಸ್ತುತ ಇರುವುದರ ಸಾಮರ್ಥ್ಯ ಹೆಚ್ಚಿಸುವ ಸಂಬಂಧ ಕೇಂದ್ರ ಸರಕಾರದಿಂದ ಅನುಮೋದನೆ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಗಮದ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರತ ಸಕ್ಕರೆ ಕಾರ್ಖಾನೆಗಳಲ್ಲಿ 32 ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನ ಘಟಕಗಳಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಘಟಕ ಸ್ಥಾಪಿಸುವ ಗುರಿ ಇದೆ ಎಂದರು.
ಭಾರತದಲ್ಲಿ 400 ಕೋಟಿ ಲೀಟರ್ ಎಥೆನಾಲ್ ಉತ್ಪಾದಿಸುತ್ತಿದ್ದು, ಈಗಾಗಲೇ ಶೇ.10ರಷ್ಟು ಮಿಶ್ರಣದ ಗುರಿ ಸಾಧಿಸಲಾಗಿದೆ. 2025ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೇ.20ರಷ್ಟು ಮಿಶ್ರಣದ ಗುರಿ ಹೊಂದಿದ್ದಾರೆ. ಇದಕ್ಕೆ ಬೇಕಾಗಿರುವ 900 ಕೋಟಿ ಲೀಟರ್ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಎಥೆನಾಲ್ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ರೀತಿಯಲ್ಲಿ ರಾಜ್ಯವೂ ಒಂದು ನೀತಿ ರೂಪಿಸುವ ಅಗತ್ಯವಿದೆ. ಜತೆಗೆ ಮುಂದಿನ ದಿನಗಳಲ್ಲಿ ಪೊಟ್ಯಾಷಿಯಂ ಮಿಶ್ರಣ ಘಟಕಗಳನ್ನು ಸ್ಥಾಪಿಸಿ ವ್ಯಾಪಾರ ವಹಿವಾಟು ಸ್ಥಾಪಿಸುವ ಕುರಿತಂತೆ ಚಿಂತನೆ ನಡೆಸಲಾಗಿದೆ ಎಂದರು.
ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಆರ್. ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.
ಜು. 8ರಂದು ವಿಚಾರ ಸಂಕಿರಣ :
ಎಥೆನಾಲ್ ಉತ್ಪಾದನೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಜು.8ರಂದು ಎಂ.ಜಿ.ರಸ್ತೆಯ ಹೊಟೇಲ್ ತಾಜ್‌ನಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ರಾಜೇಂದ್ರಕುಮಾರ್ ಹೇಳಿದರು. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ವಿವಿಧ ಕ್ಷೇತ್ರಗಳ ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.