ಹಾಸನದಲ್ಲಿ 7 ಸೆಂ.ಮೀ. ಮಳೆ
Team Udayavani, May 3, 2017, 10:12 AM IST
ಮಣಿಪಾಲ/ ಬೆಂಗಳೂರು: ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಯಿತು. ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕ, 7 ಸೆಂ.ಮೀ. ಗಳಷ್ಟು ಮಳೆ ಸುರಿಯಿತು. ಕೊಪ್ಪಳ ಜಿಲ್ಲೆ ಕೂಡ್ಲಿಗಿ ತಾಲೂಕಿನ
ಕೈವಲ್ಯಾಪುರ ಗ್ರಾಮದಲ್ಲಿ ಸಿಡಿಲಿಗೆ ಎರಡು ಎತ್ತುಗಳು ಮೃತಪಟ್ಟಿದ್ದು, ಸುಮಾರು 80 ಸಾವಿರ ರೂ.ನಷ್ಟ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಸಮೀಪದ ಹುಯಿಗೆರೆ ಸುತ್ತಮುತ್ತ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಎನ್‌ಆರ್‌ಪುರ ತಾಲೂಕಿನಲ್ಲಿ ಗಾಳಿ ಮಳೆಗೆ ವಿವಿಧೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಮೆಸ್ಕಾಂಗೆ ಲಕ್ಷಾಂತರ ರೂ.
ನಷ್ಟ ಸಂಭವಿಸಿದೆ. ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಬಿದ್ದ ಮಳೆಯ ಪ್ರಮಾಣ: (ಸೆಂ.ಮೀ.ಗಳಲ್ಲಿ): ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಆಲೂರು, ಹೆಸರಘಟ್ಟ ತಲಾ 3, ಧರ್ಮಸ್ಥಳ, ಸೋಮವಾರ ಪೇಟೆ, ಮಾದಾಪುರ, ಕೋಣನೂರು, ಎಚ್.ಡಿ.ಕೋಟೆ, ಚಿಂತಾಮಣಿ, ಕಳಸ ತಲಾ 2, ಕುಶಾಲನಗರ, ಎನ್. ಆರ್.ಪುರ, ಕೊಟ್ಟಿಗೆಹಾರ, ಶಿವಾನಿ, ಚೆನ್ನರಾಯಪಟ್ಟಣ, ನಂಜನಗೂಡು, ಯೆಳಂದೂರು, ಮಳವಳ್ಳಿ, ಕೃಷ್ಣರಾಜ ಪೇಟೆ, ಮದ್ದೂರು, ಕೋಲಾರ,
ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಶಿಡ್ಲಘಟ್ಟ, ಚನ್ನಪಟ್ಣ, ಕನಕಪುರ ತಲಾ 1. ಈ ಮಧ್ಯೆ, ದಕ್ಷಿಣ ಒಳನಾಡಿನ
ಕೆಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಬಹುತೇಕ ಸಾಮಾನ್ಯವಾಗಿತ್ತು.
ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠವೆನಿಸಿದ 40 ಡಿ.ಸೆ.ತಾಪಮಾನ ದಾಖಲಾಯಿತು. ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಂಭವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.