ಅಲೆಮಾರಿಗಳ ಅಭಿವೃದ್ಧಿಗೆ 78 ಕೋಟಿ
Team Udayavani, Mar 6, 2020, 3:03 AM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಬಾರಿಯ ಬಜೆಟ್ ನಲ್ಲಿ “ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ’ ವಲಯದಡಿ ಪರಿಶಿಷ್ಟ ಜಾತಿ, ಹಿಂದುಗಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ “ಸರ್ವೋದ ಯದ’ ಸೂತ್ರ ರೂಪಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅಲೆ ಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ.ಅನುದಾನ ಮೀಸಲಿಟ್ಟಿದ್ದಾರೆ.
ಅಲ್ಲದೆ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ.ಅನುದಾನ ಮೀಸಲಿಟ್ಟಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಯೋಜನೆ ರೂಪಿಸಿದ್ದಾರೆ.
ರಾಜ್ಯ ಬಜೆಟ್‌ನ್ನು ಎಫ್ಕೆಸಿಸಿಐ ಸ್ವಾಗತಿಸುತ್ತದೆ. ರೈತರನ್ನು ಗಮನದಲ್ಲಿಟ್ಟುಕೊಂಡು ಹೊಸ ಕೃಷಿ ನೀತಿಯನ್ನು ಪ್ರಕಟಿಸುವುದರ ಜತೆಗೆ ಸಾವಯವ ಕೃಷಿಗೆ ಆದ್ಯತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ. ಪ್ರವಾಸೋದ್ಯಮ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಜೆಟ್ ಪೂರಕವಾಗಿದೆ.
-ಸಿ.ಆರ್.ಜನಾರ್ಧನ, ಎಫ್ಕೆಸಿಸಿಐ ಅಧ್ಯಕ್ಷ
ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್ ಸಮತೋಲನದಿಂದ ಕೂಡಿದ್ದು, ಸಣ್ಣ ಕೈಗಾರಿಕೆಗಳಿಗೆ ಆದ್ಯತೆ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಾಸಿಯಾ ಸೆಂಟರ್ ಆಫ್ ಎಕ್ಸಲೆನ್ಸ್‌ಗಾಗಿ 20 ಕೋಟಿ ರೂ.ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಅದನ್ನು ಬಿಡುಗಡೆ ಮಾಡುತ್ತಾರೆ ಎಂಬ ಆಶಾಭಾವನೆ ಇದೆ.
-ಆರ್. ರಾಜು, ಕಾಸಿಯಾ ಅಧ್ಯಕ್ಷ
ರೈತರು ಹಾಗೂ ಗ್ರಾಮೀಣ ಪ್ರದೇಶವನ್ನು ಕಡೆಗಣಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಗರಾಭಿವೃದ್ಧಿಗೆ ಶೇ.11ರಷ್ಟು ಮೀಸಲಿಟ್ಟಿದ್ದಾರೆ. ಕೃಷಿ ಮತ್ತು ತೋಟಗಾರಿಕೆಗೆ ಕೇವಲ ಶೇಕಡಾ 3ರಷ್ಟು ಮೀಸಲಿಟ್ಟಿದ್ದಾರೆ. ಇದು ಯಡಿಯೂರಪ್ಪ ಅವರಿಗೆ ರೈತರ ಮೇಲಿರುವ ಕಾಳಜಿ ಗೊತ್ತಾಗುತ್ತದೆ.
-ಸಚಿನ್ ಮೀಗಾ, ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ
ನಾನು ಪ್ರಸ್ತಾಪಿಸಿದ್ದ ಹಲವು ಮಹತ್ತರ ಯೋಜನೆಗಳನ್ನು ಮುಖ್ಯಮಂತ್ರಿಗಳು ಪ್ರಕಟಿಸಿ¨ªಾರೆ. ಶೈಕ್ಷಣಿಕ ಗುಣಮಟ್ಟವನ್ನು ಉತ್ತಮ ಪಡಿಸಲು “ಶಿಕ್ಷಕ ಮಿತ್ರ’ ಎಂಬ ಮೊಬೈಲ್ ತಂತ್ರಾಂಶದ ಅಭಿವೃದ್ಧಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಪಠ್ಯಕ್ರಮದ ಕಲಿಕೆಯ ಹೊರೆಯನ್ನು ತಗ್ಗಿಸಿ ಶಿಕ್ಷಣವನ್ನು ವಿದ್ಯಾರ್ಥಿಕೇಂದ್ರಿತವಾಗಿಸಲು ಬ್ಯಾಗ್ ರಹಿತ ಸಂಭ್ರಮ ಶನಿವಾರವನ್ನು ಜಾರಿಗೆ ತಂದಿರುವುದು ಸಂತಸ ತಂದಿದೆ.
-ಎಸ್.ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.