98 ವಸತಿ ಶಾಲೆ-ನಿಲಯಗಳಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ 784 ಜನ: ಡಿಸಿಎಂ ಕಾರಜೋಳ
Team Udayavani, Apr 16, 2020, 12:13 PM IST
ಬೆಂಗಳೂರು: ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್‍ನಿಂದ ಬಾದಿತರಾದವರಿಗೆ, ನಿರಾಶ್ರಿತರಿಗೆ, ಅಸಂಘಟಿತ ಕೂಲಿ ಕಾರ್ಮಿಕರಿಗೆ, ಅಲೆಮಾರಿ ಜನಾಂಗದವರಿಗೆ ಹಾಗೂ ಆಶ್ರಯ ಕೋರಿ ಬಂದ ಒಟ್ಟು 5108 ಜನರಿಗೆ ಸಮಾಜ ಇಲಾಖೆಯ ವ್ಯಾಪ್ತಿಯ 92 ವಸತಿ ಶಾಲೆಗಳಲ್ಲಿ ಹಾಗೂ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಯಾರೂ ಅನ್ನ, ನೀರು ದೊರಕದೇ ಬಳಲಬಾರದು ಎನ್ನುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಯವಾಗಿದ್ದು, ಇದಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯು ಶ್ರಮಿಸುತ್ತಿದೆ ಎಂದರು
ತೊಂದರೆಗೊಳದ ಯಾವುದೇ ಅಂಘಟಿತ ಕಾರ್ಮಿಕರು, ಬೇರೆ ಸ್ಥಳಗಳಿಂದ ಬಂದವರು ಆಶ್ರಯ ಬೇಕಾದರೆ ಅಥವಾ ಯಾವುದೇ ತೊಂದರೆಗಳಿದ್ದರೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಿದರೆ ಸಮಸ್ಯೆ ಪರಿಹಾರವಾಗಲಿದೆ. ವಸತಿ ನಿಲಯಗಳ ಆಶ್ರಯದಲ್ಲಿರುವವರಿಗೆ ಪ್ರತಿನಿತ್ಯ ತಿಂಡಿ, ಊಟೋಪಚಾರ ನೀಡಿ, ಆರೈಕೆ ಮಾಡಲಾಗುತ್ತಿದೆ.ಸೂಕ್ತ ವಸತಿ, ಸ್ನಾನಗೃಹ ಸೌಲಭ್ಯ ಒದಗಿಸಿ, ಸಾಬೂನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ. ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತಾಲೂಕು ವೈದ್ಯಾಧಿಕಾರಿಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿಕೊಂಡು ವೈದ್ಯಕೀಯ ತಂಡವು ಇವರ ಆರೋಗ್ಯ ತಪಾಸಣೆ ಕೈಗೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ. ಈ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.