ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.48 ವಿದ್ಯಾರ್ಥಿಗಳು ನೋಂದಣಿ
Team Udayavani, Jun 23, 2020, 7:08 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರಿ ಶಾಲೆಯ 3.31 ಲಕ್ಷ, ಅನುದಾನಿತ ಶಾಲೆ 2.29 ಲಕ್ಷ ಹಾಗೂ ಅನುದಾನ ರಹಿತ ಶಾಲೆ 2.87 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಇದರಲ್ಲಿ 4.48 ಲಕ್ಷ ಹುಡುಗರು, 3.99 ಲಕ್ಷ ಹುಡುಗಿಯಒಖ ಸೇರಿಕೊಂಡಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಸಾಮಾಜಿಕ ಅಂತರದ ಹಿತ ದೃಷ್ಟಿಯಿಂದ ಬೆಂಗಳೂರು ವಿಭಾಗದಲ್ಲಿ 1,014 ಪರೀಕ್ಷಾ ಕೇಂದ್ರ, 72 ಬ್ಲಾಕ್, ಮೈಸೂರು ವಿಭಾಗದಲ್ಲಿ 587 ಪರೀಕ್ಷಾ ಕೇಂದ್ರ, 42 ಬ್ಲಾಕ್, ಬೆಳಗಾವಿ ವಿಭಾಗದಲ್ಲಿ 737 ಪರೀಕ್ಷಾ ಕೇಂದ್ರ, 134 ಬ್ಲಾಕ್, ಕಲಬುರಗಿ ವಿಭಾಗದಲ್ಲಿ 541 ಪರೀಕ್ಷಾ ಕೇಂದ್ರ, 82 ಬ್ಲಾಕ್ ಸೇರಿ ಒಟ್ಟು 2879 ಪರೀಕ್ಷಾ ಕೇಂದ್ರ ಹಾಗೂ 330 ಬ್ಲಾಕ್ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. 2,879 ಸ್ಥಾನಿಕ ಜಾಗೃತ ದಳ, 50,787 ಕೊಠಡಿ ಮೇಲಿcಚಾರಕರು, 1,246 ಮಾರ್ಗಾಧಿಕಾರಿ ಸೇರಿ 81,265 ಸಿಬ್ಬಂದಿ, ಅಧಿಕಾರಿಗಳನ್ನು ಭದ್ರತೆ ಹಾಗೂ ಸುರಕ್ಷತೆಗಾಗಿ ನೇಮಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.
ಪೊಲೀಸ್ -ಆರೋಗ್ಯ ಇಲಾಖೆ 19,222 ಅಧಿಕಾರಿಗಳು, ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 7,115 ಥರ್ಮಲ್ ಸ್ಕ್ರೀನಿಂಗ್ ಕೇಂದ್ರ, ಜಿಲ್ಲಾ ಕೇಂದ್ರದಲ್ಲಿ 34 ಸಹಾಯವಾಣಿ ಕೇಂದ್ರ, ತಾಲೂಕು ಕೇಂದ್ರದಲ್ಲಿ 204 ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಪರೀಕ್ಷೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.