ಜೈಲಿನ ಅಕ್ರಮ ಬಯಲಿಗೆಳೆಯಲು ಎಸಿಬಿಗೆ ದೂರು
Team Udayavani, Jul 22, 2017, 5:55 AM IST
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭಾರೀ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ವಕೀಲ ಎಸ್. ನಟರಾಜ್ ಶರ್ಮಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಶುಕ್ರವಾರ ದೂರು ನೀಡಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್‌ಗೆ ಐಷಾರಾಮಿ ಕೊಠಡಿ ಹಾಗೂ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಇಲಾಖೆಯ ಮಹಾನಿರ್ದೇಶಕರಾಗಿದ್ದ ಎಚ್.ಎನ್. ಸತ್ಯನಾರಾಯಣ ರಾವ್ ಸಹಿತ ಕೆಲವು ಅಧಿಕಾರಿಗಳು 2 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಡಿಐಜಿ ರೂಪಾ ಮೌದ್ಗಿಲ್ ಆರೋಪಿಸಿದ್ದು, ವರದಿಯನ್ನು ಸ್ವತಃ ಸತ್ಯನಾರಾಯಣ ರಾವ್ ಅವರಿಗೆ ನೀಡಿದ್ದಾರೆ. ಹೀಗಾಗಿ ಯಾರು ಯಾರಿಗೆ 2 ಕೋಟಿ ರೂ. ಲಂಚ ನೀಡಿದ್ದಾರೆ ಎಂಬುದು ತಿಳಿಯಬೇಕಿದೆ. ಇದರೊಂದಿಗೆ ಛಾಪಾ ಕಾಗದ ಹಗರಣದ ರೂವಾರಿ ಕರೀಂಲಾಲ್ ತೆಲಗಿಗೂ ಐಷಾರಾಮಿ ಸೌಲಭ್ಯ ಕೊಡಲಾಗಿದ್ದು, ಇಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನೂ ರೂಪಾ ಮಾಡಿದ್ದಾರೆ.
ವಿಪರ್ಯಾಸವೆಂದರೆ ಹಿರಿಯ ಅಧಿಕಾರಿಗಳಿಗೆ ವರದಿ ತಲುಪುವ ಮೊದಲೇ ಮಾಧ್ಯಮಗಳಿಗೆ ವರದಿ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರೂಪಾ ಅವರನ್ನೂ ವಿಚಾರಣೆಗೊಳಪಡಿಸಬೇಕು. ಅಲ್ಲದೇ ರೂಪಾ ಅವರಿಂದ ಸೂಕ್ತ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ತೆಲಗಿಗೆ ನೀಡಿರುವ ಸೌಲಭ್ಯ ಬಗ್ಗೆ ಆತನ ಕೊಠಡಿಯಲ್ಲಿ ಅಳವಡಿಸಿರುವ ಸಿಸಿಟಿವಿ ಕೆಮೆರಾಗಳ ಮೂಲಕ ಡಿಜಿಪಿ ಸತ್ಯನಾರಾಯಣ ರಾವ್ ವೀಕ್ಷಿಸಿದರೂ ಯಾವ ಕಾರಣಕ್ಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ. ರೂಪಾ ಎಸಿಬಿಗೆ ದೂರು ನೀಡಿದರೂ ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದು ತಮ್ಮ ದೂರಿನಲ್ಲಿ ಶರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.