65 ಅಡಿ ಆಳದ ಬಾವಿಗೆ ಬಿದ್ದು ಬದುಕುಳಿದ 85 ವರ್ಷದ ಅಜ್ಜಿ
Team Udayavani, May 25, 2019, 3:04 AM IST
ವಿಜಯಪುರ: ಜಿಲ್ಲೆಯಲ್ಲಿ 85ರ ವೃದ್ಧೆಯೊಬ್ಬರು ಆಕಸ್ಮಿಕವಾಗಿ 65 ಅಡಿ ಆಳದ 15 ಅಡಿ ನೀರಿದ್ದ ಬಾವಿಗೆ ಬಿದ್ದರೂ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ರಕ್ಷಿಸಲ್ಪಟ್ಟ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಗದ್ಯಾಳ ತೋಟದ ವಸ್ತಿಯಲ್ಲಿ ಮನೆಯ ಮುಂದಿದ್ದ ಬಾವಿಯ ಬಳಿ ಹೋಗಿದ್ದಾಗ ತಂಗೆವ್ವ ಗದ್ಯಾಳ ಎಂಬ 85ರ ವೃದ್ಧೆ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದ್ದಾಳೆ. 65 ಅಡಿ ಆಳವಿದ್ದ ಈ ಬಾವಿ ಭೀಕರ ಬರದಿಂದ ಬತ್ತಿದ್ದು, ಟ್ಯಾಂಕರ್ ಮೂಲಕ 15 ಅಡಿ ನೀರು ತುಂಬಿಸಲಾಗಿತ್ತು.
ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದ್ದ ಅಜ್ಜಿ ಸುಮಾರು ಒಂದು ಗಂಟೆ ಕಾಲ ಪಂಪ್‌ಸೆಟ್‌ಗೆ ಅಳವಡಿಸಿದ್ದ ಪೈಪ್ ಹಿಡಿದುಕೊಂಡು ನಿಂತಿದ್ದಾಳೆ. ರಕ್ಷಣೆಗೆ ಅಜ್ಜಿ ಕೂಗಿಕೊಂಡರೂ ಅಳದಲ್ಲಿದ್ದ ಬಾವಿಯಿಂದ ಅಜ್ಜಿಯ ಕೀರು ಧ್ವನಿ ಯಾರಿಗೂ ಕೇಳಿಸಿಲ್ಲ. ಈ ಹಂತದಲ್ಲಿ ಅಜ್ಜಿ ಕಾಣೆಯಾಗಿದ್ದರಿಂದ ಮನೆಯವರು ಸುತ್ತಮುತ್ತಲಿನ ತೋಟದ ವಸ್ತಿಗಳಲ್ಲೆಲ್ಲ ಹುಡುಕಾಡಿ ಮನೆಗೆ ಬಂದು, ಬಾವಿಯಲ್ಲಿ ಇಣುಕಿದಾದ ಅಜ್ಜಿ ರಕ್ಷಣೆಗೆ ಮೊರೆ ಇಡುತ್ತಿರುವುದು ಕಂಡಿತು.
ಕೂಡಲೇ ಮನೆಯವರು ಹೊರಸಿನ ನಾಲ್ಕು ಕಾಲಿಗೆ ಹಗ್ಗ ಕಟ್ಟಿ ಬಾವಿಯೊಳಗೆ ಬಿಟ್ಟು, ಅಜ್ಜಿಯನ್ನು ರಕ್ಷಿಸಿದ್ದಾರೆ. ರಕ್ಷಣೆ ಬಳಿಕ ಕೂಡಲೇ ಅಜ್ಜಿಗೆ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿದ್ದು, ಅಜ್ಜಿ ಸುರಕ್ಷಿತವಾಗಿದ್ದಾಳೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.