Karnataka Govt: 9 ಪ್ರತಿಷ್ಠಾನ, ಟ್ರಸ್ಟ್‌ಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ
Team Udayavani, Dec 14, 2024, 12:03 AM IST
ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆಯಡಿ ಕಾರ್ಯ ನಿರ್ವಹಿಸುವ 9 ವಿವಿಧ ಪ್ರತಿಷ್ಠಾನ ಮತ್ತು ಟ್ರಸ್ಟ್‌ಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಸರಕಾರ ಆದೇಶಿಸಿದೆ.
ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ| ಬಿ.ಎಲ್. ಶಂಕರ್ ಅಧ್ಯಕ್ಷತೆ, ಸೂಳೇಬಾವಿಯ ಪಿ.ಬಿ. ದುತ್ತರಗಿ ಟ್ರಸ್ಟ್‌ಗೆ ಸಂಗಪ್ಪ ಕಲ್ಲಪ್ಪ ಕೊನೆಸಾಗರ ಅಧ್ಯಕ್ಷತೆ, ಉಡುಪಿಯ ಡಾ| ಶಿವರಾಮ ಕಾರಂತ ಟ್ರಸ್ಟ್‌ಗೆ ಗಣನಾಥ ಎಕ್ಕಾರು ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಲಾಗಿದೆ.
ಮಂಡ್ಯದ ಪು.ತಿ.ನ. ಟ್ರಸ್ಟ್‌ಗೆ ಮೈಸೂರಿನ ಎಂ. ಕೃಷ್ಣಗೌಡ ಅಧ್ಯಕ್ಷರಾಗಿದ್ದಾರೆ.
ಬಾಗಲಕೋಟೆಯ ಕವಿಚಕ್ರವರ್ತಿ ರನ್ನ ಪ್ರತಿಷ್ಠಾನಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆ ಯಲ್ಲಿ, ವಿಜಯಪುರದ ಹಲಸಂಗಿ ಗೆಳೆಯರ ಟ್ರಸ್ಟ್‌ಗೆ ವಿಜಯಪುರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ, ಬೆಳಗಾವಿಯ ಡಾ| ಬಸವರಾಜಕಟ್ಟಿಮನಿ ಪ್ರತಿಷ್ಠಾನಕ್ಕೆ ರಾಯಭಾಗದ ಡಾ| ಯಲ್ಲಪ್ಪ ಹಿಮ್ಮಡಿ ಅಧ್ಯಕ್ಷತೆಯಲ್ಲಿ, ಬೆಳಗಾವಿ ಬೇಟಗೇರಿ ಕೃಷ್ಣಶರ್ಮ ಟ್ರಸ್ಟ್‌ಗೆ ಧಾರವಾಡದ ಡಾ| ವಿನಯ ನಾಯಕ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಿದೆ. ಮಂಡ್ಯದ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್‌ಗೆ ಕೇವಲ ಸದಸ್ಯರು ಹಾಗೂ ಕಾರ್ಯದರ್ಶಿಯನ್ನು ನೇಮಿಸಿದೆ. ಅಧಿಕಾರಾವಧಿ 3 ವರ್ಷಗಳದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.