ಮುಂದಿನ 2 ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಾಣ: ಸೋಮಣ್ಣ
Team Udayavani, Jul 9, 2021, 6:45 AM IST
ಬೆಂಗಳೂರು: ಎರಡು ವರ್ಷಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ವಸತಿ ಯೋಜನೆಯಡಿ 9 ಲಕ್ಷ ಮನೆಗಳನ್ನು ನಿರ್ಮಿಸಲು ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತ ನಾಡಿದ ವಸತಿ ಸಚಿವ ವಿ.ಸೋಮಣ್ಣ, ರಾಜ್ಯದಲ್ಲಿ ವಸತಿಹೀನರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಎರಡು ವರ್ಷಗಳಲ್ಲಿ ರಾಜ್ಯ ಸರ ಕಾರದ ಯೋಜನೆಗಳಡಿ 5 ಲಕ್ಷ ಮನೆ, ಕೇಂದ್ರ ಸರಕಾರದ ಯೋಜನೆಗಳಡಿ 4 ಲಕ್ಷ ಮನೆ ಗಳನ್ನು ನಿರ್ಮಿಸಲಾಗುವುದು ಎಂದರು.
ಮನೆ ನಿರ್ಮಾಣ ಸಂಬಂಧ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ 1.75 ಲಕ್ಷ ರೂ. ಮತ್ತು ಇತರ ವರ್ಗದವರಿಗೆ 1.20 ಲಕ್ಷ ರೂ. ಸಹಾಯಧನ ದೊರೆಯಲಿದೆ. ಕೇಂದ್ರದ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳಿಗೆ ಫಲಾನುಭವಿಗಳಿಗೆ ಶೇ.60 ಅಂದರೆ 72,000 ಮತ್ತು ರಾಜ್ಯದ ಪಾಲು ಶೇ.40 ಅಂದರೆ 48,000 ರೂ. ಸಹಾಯಧನ ಲಭ್ಯವಿದೆ ಎಂದರು.
ಪ್ರತಿ ಗ್ರಾ.ಪಂ.ಗೆ 100 ಮನೆ :
ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುವುದು. ಪ್ರಸ್ತುತ ನಿರ್ಮಾಣದ ವಿವಿಧ ಹಂತಗಳಲ್ಲಿರುವ ಸರಕಾರದ ಬಸವ ವಸತಿ ಯೋಜನೆ, ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿ ಕೈಗೆತ್ತಿಕೊಂಡಿರುವ ಕಾಮಗಾರಿ ಪೂರ್ಣಗೊಳಿಸಲು 6,200 ಕೋ. ರೂ.ಗಳ ಅಗತ್ಯವಿದೆ. ಹಂತಹಂತವಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರಿಂದ ಭರವಸೆ ದೊರೆತಿದೆ ಎಂದು ವಿವರಿಸಿದರು.
ಸಾರಿಗೆ ದಾಖಲೆಗಳ ಡಿಜಿಟಲೀಕರಣ: ಸವದಿ :
ಸಾರಿಗೆ ಇಲಾಖೆಯ ದಾಖಲೆಗಳ ಡಿಜಟಲೀಕರಣ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಎಚ್.ಎಸ್.ಆರ್.ಬಡಾವಣೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸಾರಿಗೆ ಇಲಾಖೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಚೇರಿಯಿಂದಲೇ ಆರಂಭವಾಗಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಸಾರಿಗೆ ಇಲಾಖೆ ಸುಧಾರಣೆಗೆ ಕೆಲವು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವುಗಳನ್ನು ಇಲಾಖೆಯಲ್ಲಿ ಅಳವಡಿಕೆ ಮಾಡಿಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುವ ಭರವಸೆಯನ್ನು ಸಚಿವರು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.