9,55,943 ಮನೆ ಮಂಜೂರು: ಸೋಮಣ್ಣ
Team Udayavani, Mar 17, 2020, 3:03 AM IST
ವಿಧಾನಸಭೆ: ರಾಜ್ಯದಲ್ಲಿ 2017 ರಿಂದ ವಾಜಪೇಯಿ, ಬಸವ , ಅಂಬೇಡ್ಕರ್ ಸೇರಿ ವಿವಿಧ ವಸತಿ ಯೋಜನೆಗಳಡಿ 9,55,943 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಇತ್ತೀಚೆಗಷ್ಟೇ 39 ಸಾವಿರ ಮನೆಗಳಿಗೆ 183 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ವೇದ ವ್ಯಾಸ್ ಕಾಮತ್ ಪ್ರಶ್ನೆಗೆ ಉತ್ತರಿಸಿ, ಸಾಕಷ್ಟು ಕಾಲಾವಕಾಶ ನೀಡಿದರೂ ಪ್ರಾರಂಭಗೊಳ್ಳದ 2,74,253 ಮನೆ ಬ್ಲಾಕ್ ಮಾಡಲಾಗಿತ್ತು ನಂತರ ಸಚಿವ ಸಂಪುಟದಲ್ಲಿ ಬ್ಲಾಕ್ ಆಗಿರುವ ಎಲ್ಲ ಮನೆ ಆನ್‌ಬ್ಲಾಕ್ ಮಾಡಿ 1 ತಿಂಗಳು ಕಾಲಾವಕಾಶ ನೀಡಿ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ. ಮಾರ್ಚ್ ಅಂತ್ಯದವರೆಗೂ ಕಾಲಾವಕಾಶ ಇದೆ ಎಂದು ಹೇಳಿದರು.
ಮನೆಗಳು ಪೂರ್ಣಗೊಂಡ ನಂತರ ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ರವಾನಿ ಸಿದ ತಕ್ಷಣ ಹಣ ಆರ್‌ಟಿಜಿಎಸ್ ಮೂಲಕ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದರು.
ಕಾಂಗ್ರೆಸ್‌ನ ಶಿವಾನಂದ ಪಾಟೀಲ್, ಯು.ಟಿ.ಖಾದರ್ ಸೇರಿ ಹಲವು ಸದಸ್ಯರು, ವಸತಿ ಯೋಜನೆಗಳಡಿ ಫಲಾನುಭವಿಗಳ ಪಾಲಿನ ಹಣ ಹೊಂದಿಸುವುದು ಬಡವರಿಗೆ ಕಷ್ಟವಾ ಗುತ್ತಿದೆ. ಬ್ಯಾಂಕುಗಳ ಮೂಲಕ ಅವ ರಿಗೆ ಸಾಲದ ವ್ಯವಸ್ಥೆ ಮಾಡಿ ಸಬೇಕು ಎಂದು ಒತ್ತಾಯಿಸಿದರು. ಉಡುಪಿಯಲ್ಲಿ ಬರೋಡಾ ಬ್ಯಾಂಕ್ ಸಾಲ ನೀಡಲು ಮುಂದಾಗಿದೆ. ಆದರೆ, ಇತರೆ ಜಿಲ್ಲೆಗಳಲ್ಲಿ ಬ್ಯಾಂಕ್‌ನವರು ಮುಂದಾಗುತ್ತಿಲ್ಲ, ಈ ಕುರಿತು ಬ್ಯಾಂಕ್ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.