ಸನ್ನಡತೆ: 96 ಕೈದಿಗಳ ಅವಧಿಪೂರ್ವ ಬಿಡುಗಡೆ
Team Udayavani, May 26, 2022, 9:45 PM IST
ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 96 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಗುರುವಾರ ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 45 ಮಂದಿ ಹಾಗೂ ರಾಜ್ಯದ ಇತರ ಜೈಲುಗಳಲ್ಲಿದ್ದ 51 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಗೊಂಡವರು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಜೈಲಿನಲ್ಲಿ ಅವರ ಪರಿವರ್ತನೆ ಹಾಗೂ ಬದಲಾವಣೆ ಕಂಡು ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಕೆಲವು ತಿಂಗಳ ಹಿಂದೆ ಸನ್ನಡತೆ ಆಧಾರದ ಮೇಲೆ ಸುಮಾರು 120ಕ್ಕೂ ಅಧಿಕ ಮಂದಿಗಳ ಹೆಸರನ್ನು ಉಲ್ಲೇಖೀಸಿ ಬಿಡುಗಡೆಗೆ ಕಾರಾಗೃಹ ಇಲಾಖೆಗೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಈ ಪೈಕಿ 24 ಮಂದಿ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿದ್ದರಿಂದ ಬಿಡುಗಡೆಗೆ ಸರಕಾರ ಹಾಗೂ ರಾಜ್ಯಪಾಲರು ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.