ಎ.14: ರಾಜ್ಯದಲ್ಲಿ ಮೋದಿ ಪ್ರಚಾರ; ಬೆಂಗಳೂರು ಉತ್ತರದಲ್ಲಿ 2 ಕಿ.ಮೀ. ರೋಡ್ ಶೋ
ದಕ್ಷಿಣ ಕನ್ನಡಕ್ಕೂ ಆಗಮಿಸಲಿದ್ದಾರೆಯೇ ಪ್ರಧಾನಿ?
Team Udayavani, Apr 8, 2024, 7:05 AM IST
ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಕಣ ರಂಗೇರುತ್ತಿದ್ದು ಪ್ರಮುಖ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ಅಖಾಡಕ್ಕೆ ಧುಮುಕಿದ್ದಾರೆ. ಈಗಾಗಲೇ ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಯವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಜನ್ಮದಿನವಾಗಿರುವ ಎ. 14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿ ಆಗಮನಕ್ಕೆ ರಾಜ್ಯ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಳ್ಳುತ್ತಿದೆ. ಎಲ್ಲೆಲ್ಲಿ ಪ್ರಚಾರ ಸಭೆ ಆಯೋಜಿಸಬೇಕು, ರ್ಯಾಲಿ ಮಾಡುವುದಾದರೆ ಹೇಗೆ?
ರೋಡ್ ಶೋ ಆದರೆ ಎಲ್ಲಿಂದ ಎಲ್ಲಿಯ ವರೆಗೆ ಎಂಬ ಚರ್ಚೆ ಬಿಜೆಪಿ ನಾಯಕರಲ್ಲಿ ನಡೆದಿದ್ದು, ಶೀಘ್ರವೇ ಕಾರ್ಯಕ್ರಮದ ನೀಲನಕ್ಷೆ ಸಿದ್ಧಗೊಳ್ಳಲಿದೆ.
ವೇದಿಕೆಯಲ್ಲಿ ಮಹಿಳೆಯರಿಗೆ ಮಣೆ?
ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿರುವುದನ್ನು ಪ್ರತಿಪಾದಿಸುವ ಸಲುವಾಗಿ ಪ್ರತೀ ಕಾರ್ಯಕ್ರಮದ ವೇದಿಕೆಯಲ್ಲೂ ಪ್ರಧಾನಿಯ ಜತೆಗೆ ಮಹಿಳೆಯರಿಗೂ ಹೆಚ್ಚಿನ ಪ್ರಾತಿನಿಧ್ಯ ಕೊಡುವ ಚಿಂತನೆಗಳು ನಡೆದಿವೆ. ರೋಡ್ ಶೋ ಆದರೆ ಸ್ಥಳೀಯ ಅಭ್ಯರ್ಥಿಗೆ ಮಾತ್ರ ಸ್ಥಾನ ಇರಲಿದ್ದು, ಆವಶ್ಯಕತೆ ಬಿದ್ದರಷ್ಟೇ ಹೆಚ್ಚುವರಿಯಾಗಿ ಒಬ್ಬರೇ ಒಬ್ಬ ನಾಯಕರಿಗೆ ಮಾತ್ರ ಸ್ಥಾನ ಕಲ್ಪಿಸುವ ಚರ್ಚೆಗಳಾಗಿವೆ.
ಮಂಗಳೂರಿನಲ್ಲೂ ಪ್ರಚಾರ?
ಮಂಗಳೂರು: ಮೋದಿ ಎ. 14ರಂದು ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ನಗರದಲ್ಲಿ ನಡೆಯಲಿರುವ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳುವ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಎ. 14ರಂದು ಅಪರಾಹ್ನ ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸುವ ಬಗ್ಗೆ ತೀರ್ಮಾನ ಆಗಿದೆ. ಸಮಾವೇಶ ಎಲ್ಲಿ ನಡೆಯಲಿದೆ ಎಂಬುದನ್ನು ಸೋಮವಾರ ಅಂತಿಮಗೊಳಿಸಲಾಗುವುದು ಎಂದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿಯೂ ಪ್ರಧಾನಿ ಪ್ರಚಾರ ಕಾರ್ಯ ಕೈಗೊಳ್ಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.