ಲೈಂಗಿಕ ಕಿರುಕುಳ ಪ್ರಕರಣ; ಪ್ರಜ್ವಲ್‌ನಿಂದ ನಿರೀಕ್ಷಣ ಜಾಮೀನಿಗೆ ಅರ್ಜಿ
ನಾಳೆ ಜನಪ್ರತಿನಿಧಿಗಳ ಕೋರ್ಟಿನಲ್ಲಿ ವಿಚಾರಣೆ
Team Udayavani, May 30, 2024, 7:10 AM IST
ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದಂತೆ ಬಂಧಿಸಲ್ಪಡುವ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬುಧವಾರ ವಿಚಾರಣೆ ನಡೆದಿದೆ.
ಅರ್ಜಿ ವಿಚಾರಣೆ ಸಂದರ್ಭ ಆರೋಪಿ ಪರ ವಕೀಲರು ಅರ್ಜಿಯ ತುರ್ತು ವಿಚಾರಣೆ ನಡೆಸಲು ಕೋರಿದರು. ಅದಕ್ಕೆ ವಿಶೇಷ ಅಭಿಯೋಜಕರು ಆಕ್ಷೇಪಿಸಿದರು. ನ್ಯಾಯಾಧೀಶರು ಕೂಡ, ಆರೋಪಿ ವಿರುದ್ಧ 3 ಪ್ರಕರಣಗಳಿದ್ದು, ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕಾಗುತ್ತದೆ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದರು.
ನಾಳೆ ಬೆಂಗಳೂರಿಗೆ ಪ್ರಜ್ವಲ್?
ಇತ್ತೀಚೆಗೆ ವೀಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಬೆಂಗಳೂರಿಗೆ ಬರುತ್ತೇನೆ. ಬಳಿಕ ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರ ಆಗಮನಕ್ಕೆ ಎಸ್‌ಐಟಿ ಕಾಯುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲೇ ಅವರನ್ನು ವಶಕ್ಕೆ ಪಡೆಯಲು ಸಿದ್ಧವಾಗಿದೆ ಎನ್ನಲಾಗಿದೆ.
ಹಂಗೇರಿಯಿಂದ ವೀಡಿಯೋ ಬಿಡುಗಡೆ!
ಇತ್ತೀಚೆಗೆ ಪ್ರಜ್ವಲ್ ನಿಗೂಢ ಸ್ಥಳದಿಂದ ವೀಡಿಯೋ ಬಿಡುಗಡೆ ಮಾಡಿದ್ದರು. ಅದರ ಮೂಲವನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಪ್ರಜ್ವಲ್ ಯೂರೋಪ್‌ನ ಹಂಗೇರಿ ರಾಜಧಾನಿ ಬುಡಾಪೆಸ್ಟ್‌ನಿಂದ ವೀಡಿಯೋ ಮಾಡಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.