ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ? ಡಿಕೆಶಿ ಗೆ ಬಿಜೆಪಿ ಪ್ರಶ್ನೆ
Team Udayavani, Nov 17, 2020, 10:16 AM IST
ಬೆಂಗಳೂರು: ರಾಜ್ಯದ ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ ಡಿ ಕೆ ಶಿವಕುಮಾರ್ ಅವರೇ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನದ ಬಳಿಕ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮಾಧ್ಯಮದ ಮೂಲಕ ‘ಡಿಕೆಶಿಯವರೇ ಈಗಲಾದರೂ ನನ್ನ ಪರವಾಗಿ ನಿಲ್ಲಿ’ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರೇ ಏನಾಗುತ್ತಿದೆ? ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ ಡಿ ಕೆ ಶಿವಕುಮಾರ್ ಅವರೇ ಎಂದು ಕೇಳಿದೆ.
ಕಾಂಗ್ರೆಸ್ ಎಗೈನ್ಸ್ಟ್ ದಲಿತ್ಸ್ ಎಂಬ ಹ್ಯಾಶ್ ಟ್ಯಾಗ್ ನಡಿ ಟ್ವೀಟ್ ಮಾಡಿರುವ ಬಿಜೆಪಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕಾಲದಿಂದಲೇ ಕಾಂಗ್ರೆಸ್ ಪಕ್ಷ ದಲಿತರ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲೂ ಅದರ ಮುಂದುವರೆದ ಭಾಗಗಳನ್ನು ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆ. ಹಿರಿಯ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಜಿ ಪರಮೇಶ್ವರ್ ಅವರ ಸೋಲುಗಳ ಹಿಂದೆ ಕಾಂಗ್ರೆಸ್ಸಿನ ದಲಿತ ವಿರೋಧಿ ನೀತಿಯಿದೆ ಎಂದು ಆರೋಪಿಸಿದೆ.
ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ ಪ್ರಕರಣ: ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಬಂಧನ
ಕಳೆದ ಆಗಸ್ಟ್ ನಲ್ಲಿ ಪುಲಕೇಶೀ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಕಾಂಗ್ರೆಸ್ ನ ಸಂಪತ್ ರಾಜ್ ಅವರನ್ನು ಸೋಮವಾರ ಸಂಜೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಂಪತ್ ರಾಜ್ ಬಂಧನದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ನಮ್ಮ ಜೊತೆಯಿದ್ದಾರೆ. ಡಿ ಕೆ ಶಿವಕುಮಾರ್ ಅವರೇ ಇನ್ನಾದರೂ ನಮ್ಮ ಪರ ನಿಲ್ಲಿ ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.