Karnataka: ಮತ್ತಷ್ಟು ರಂಗೇರುತ್ತಿರುವ ಪಕ್ಷಾಂತರ ಕಣ
Team Udayavani, Aug 20, 2023, 12:25 AM IST
ಒಂದು ಕಡೆ ಸಂಧಾನದ ಪ್ರಯತ್ನ ನಡೆಯುತ್ತಿದ್ದರೂ ರಾಜ್ಯದಲ್ಲಿ ಶಾಸಕರ ಸೇರ್ಪಡೆ, ಆಪರೇಷನ್ ಕಸರತ್ತು ಬೆಳವಣಿಗೆಗಳು ದಿನದಿಂದ ದಿನಕ್ಕೆ ರಂಗೇರುತ್ತಲೇ ಇವೆ. ಬಿಜೆಪಿ, ಜೆಡಿಎಸ್‌ನಿಂದ ಎಂಟತ್ತು ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಪ್ರಮುಖರು ಹೇಳುತ್ತಿದ್ದಾರೆ. ನಾವು ಆಪರೇಷನ್ ಕಾಂಗ್ರೆಸ್ ಮಾಡಿಯೇ ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳುವ ಮೂಲಕ ಚರ್ಚೆಗೆ ಮತ್ತಷ್ಟು ಬಲ ತುಂಬಿದ್ದಾರೆ. ಇತ್ತ ಬಿಜೆಪಿ ನಾಯಕರು ಮಾತ್ರ ನಮ್ಮ ಪಕ್ಷದಿಂದ ಯಾರೂ ಕಾಂಗ್ರೆಸ್ ಸೇರುವುದಿಲ್ಲ ಎನ್ನುತ್ತಿದ್ದಾರೆ. ಅಂತೂ ರಾಜಕೀಯ ಆಸಕ್ತರೆಲ್ಲರಲ್ಲೂ ಈಗ ಪಕ್ಷಾಂತರದ್ದೇ ಮಾತು.
ಬಿಜೆಪಿಯ ಅಪರೇಷನ್ ಸರಿ; ನಮ್ಮದು ತಪ್ಪೇ?
ಬೆಂಗಳೂರು: ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ, ಇಲ್ಲಿಗೆ ಯಾರೂ ಬೇಕಾ ದರೂ ಬರಬಹುದು ಎನ್ನುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದು ಎಂಬ ಸುಳಿವು ನೀಡಿದರು.
ಕಾಂಗ್ರೆಸ್ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಪಕ್ಷಗಳ ಶಾಸಕರನ್ನು ಸೆಳೆಯಲು ಮುಂದಾಗಿದೆ ಎಂಬ ಆರೋಪಕ್ಕೆ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, “ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? ತಾನು ಕಳ್ಳ, ಪರರನ್ನು ನಂಬ ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಬಿಜೆಪಿ ಮಾಡಿದ್ದೇನು? ಆಯಾಯ ಪರಿಸ್ಥಿತಿಗೆ ಏನು ಬೇಕೋ ಅದು ಕಾಲಕಾಲಕ್ಕೆ ನಡೆಯುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ಉತ್ತಮ ರಾಜಕೀಯ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಒಳ್ಳೆಯದು, ಕೆಟ್ಟದ್ದು ವ್ಯಕ್ತಿಗತವಾದ ಆಲೋಚನೆ. ಪ್ರಜಾಪ್ರಭುತ್ವ ಉಳಿಯಬೇಕು, ಈ ದೇಶ, ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸಬೇಕೆಂದು ಯಾರು ಯಾರಿಗೆ ಇದೆಯೋ ಅಂಥವರು ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದನ್ನು° ನಾವು ನಿರ್ಬಂಧ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.
ಈ ಹಿಂದೆ ಯಾರ್ಯಾರು ಏನೇನು ಮಾತನಾಡಿದರು, ಏನು ಮಾತನಾಡಲು ಬಂದಿದ್ದರು ಎಂಬುದನ್ನೆಲ್ಲ ಈಗ ಬಿಡಿಸಿ ಹೇಳಬೇಕೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೀವು ಇದೇ ರೀತಿ ಇರಬೇಕು ಎಂದು ನಿರ್ದೇಶಿಸಲು ಆಗುವುದಿಲ್ಲ. ವಿಪಕ್ಷಗಳು ಏನು ಬೇಕಾದರೂ ಆರೋಪ ಮಾಡಲಿ, ನಮಗೆ ತೊಂದರೆ ಇಲ್ಲ ಎಂದು ಹೇಳಿದರು.
ನಾಯಕನ ಆಯ್ಕೆ ಮಾಡಲಿ
ಆ. 23ರಂದು ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ್ದಕ್ಕೆ, “ಮೊದಲು ಅವರ ನಾಯಕರು ಯಾರು ಎಂದು ತೀರ್ಮಾನ ಮಾಡಿಕೊಂಡು ಆಮೇಲೆ ಹೋರಾಟ ಮಾಡಲಿ’ ಎಂದು ಛೇಡಿಸಿದರು.
ಶಾಸಕರ್ಯಾರೂ ಕಾಂಗ್ರೆಸ್ ಸೇರುವುದಿಲ್ಲ: ಆರಗ
ಶಿವಮೊಗ್ಗ: ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಸೇರುವುದಿಲ್ಲ. ಕೆಲವರಲ್ಲಿ ಒಂದಿಷ್ಟು ಅಸಮಾಧಾನ ಇದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಅತೃಪ್ತರನ್ನು ಕರೆದು ಮಾತನಾಡಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಸುಮ್ಮನೆ ಗುಲ್ಲೆಬ್ಬಿಸುತ್ತಿದ್ದಾರೆ. ಕೆಲವು ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ವಿಷಯವನ್ನು ಮರೆಮಾಚಲು “ಘರ್ ವಾಪ್ಸಿ’ ವಿಚಾರವನ್ನು ಬೆಳಕಿಗೆ ತಂದಿದ್ದಾರೆ ಎಂದರು. ಈ ಸರಕಾರ ಬಹಳ ದಿನ ಉಳಿಯದು. ಲೋಕಸಭೆ ಚುನಾವಣೆ ಇದರ ಗಡುವು ಅಂತ ಎಲ್ಲರೂ ಹೇಳುತ್ತಿದ್ದಾರೆ. ಎಲ್ಲವನ್ನೂ ಗ್ಯಾರಂಟಿ ಯೋಜನೆಗೇ ಕೊಡಲಾಗುತ್ತಿದೆ. ಬೇರೆ ಯಾವ ಕೆಲಸಕ್ಕೂ ಸರಕಾರದಲ್ಲಿ ಹಣವಿಲ್ಲ. ಕೃಷಿ ಕ್ಷೇತ್ರಕ್ಕೆ ಮೀಸಲಿಟ್ಟ ಹಣವನ್ನೂ ತೆಗೆದು ಗ್ಯಾರಂಟಿಗೆ ಕೊಡಲಾಗುತ್ತಿದೆ ಎಂದು ಆರೋಪಿಸಿದರು.
ವಿಪಕ್ಷದಿಂದ 8-10 ಶಾಸಕರು ಬರಬಹುದು
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅತ್ಯಧಿಕ ಸ್ಥಾನಗಳನ್ನು ಗೆಲ್ಲಬೇಕೆಂಬ ಲೆಕ್ಕಾಚಾರ ಹಾಕಿರುವ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್‌ನಿಂದ 8-10 ಶಾಸಕರು ಕಾಂಗ್ರೆಸ್ ಸೇರಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಬೆಂಗಳೂರಿನ “ಉದಯವಾಣಿ’ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದ ಸಚಿವರು, ಕೆಲವರು ವೈಯಕ್ತಿಕ ವರ್ಚಸ್ಸಿನಲ್ಲಿ ಕ್ಷೇತ್ರದಲ್ಲಿ ಗೆಲ್ಲುವ ಶಕ್ತಿ ಹೊಂದಿದ್ದಾರೆ. ಅಂಥ ವರು ಕ್ಷೇತ್ರದ ಅಭಿವೃದ್ಧಿ ಸಹಿತ ಕೆಲವು ಕಾರಣಗಳಿಂದ ಪಕ್ಷ ತೊರೆಯಲು ನಿರ್ಧರಿಸಿರಬಹುದು. ಬಿಜೆಪಿ, ಜೆಡಿಎಸ್‌ನ ವಿದ್ಯಮಾನಗಳಿಂದ ಬೇಸತ್ತು ಕೆಲವು ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದರು.
ಹೈಕಮಾಂಡ್ ಸೂಚಿಸಿದರೆ ಕೆಲವು ಸಚಿವರು ಲೋಕಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಬಹುದು ಎಂದರು.
“ಬಾಂಬೆ ಟೀಂ’ ಬಿಜೆಪಿ ತೊರೆಯದು
ಬೀದರ್: “ಬಾಂಬೆ ಟೀಂ’ನ ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲ ಎಂಬ ವ್ಯತ್ಯಾಸವಿಲ್ಲದೆ ನಾವೆಲ್ಲ ಒಟ್ಟಾಗಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಹಳ್ಳಿಖೇಡದಲ್ಲಿ ಶನಿ ವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಬಿಜೆಪಿ ಸೇರಿ ನಮ್ಮ ಸರಕಾರದಲ್ಲಿ ಅವರು ಮಂತ್ರಿಯಾಗಿದ್ದಾರೆ. ಅವರಿಗಾಗಿ ನಾವು ಮಂತ್ರಿ ಸ್ಥಾನ ತ್ಯಾಗ ಮಾಡಿದ್ದೆವು. ಅವರಿಂದ ನಮಗೆ ಮತ್ತು ನಮ್ಮಿಂದ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಹೀಗಾಗಿ ಅವರು ಕಾಂಗ್ರೆಸಿಗೆ ಮರಳುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ನಲ್ಲೇ ಒಡಕು ಮೂ ಡಿರುವಾಗ ಅಲ್ಲಿಗೆ ಹೋಗಿ ಇವರು ಮಾಡುವುದಾದರೂ ಏನು ಎಂದು ಪ್ರಶ್ನಿಸಿದರು.
ವರಿಷ್ಠರು ಅಳೆದು ತೂಗಿ ವಿಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಿದ್ದಾರೆ. ಶ್ರಾವಣ ಮಾಸ ಮುಗಿಯುವುದರೊಳಗೆ ಈ ಆಯ್ಕೆ ನಡೆ ಯಲಿದೆ. ಯಡಿಯೂರಪ್ಪ, ಬೊಮ್ಮಾಯಿ ಮತ್ತು ನಾನು ಸಹೋದರರಂತೆ ಇದ್ದೇವೆ. ನೀವು ಮಧ್ಯೆ ಬಂದು ಜಗಳ ಹಚ್ಚಬೇಡಿ ಎಂದು ಮಾಧ್ಯಮದವರ ವಿರುದ್ಧ ಗರಂ ಆದ ಯತ್ನಾಳ್, ಲೋಕಸಭೆ ಚುನಾವಣೆಗೆ ಮೋದಿ ವಿರುದ್ಧ ಯಾರೂ ಬೇಕಾದರೂ ನಿಲ್ಲಲಿ. ಮೋದಿ ಗೆದ್ದು 2024ರಲ್ಲಿ ಮತ್ತೂಂದು ಬಾರಿ ಪ್ರಧಾನಿಯಾಗುವುದು ನಿಶ್ಚಿತ. ಆಗ ಸೋನಿಯಾ ಗಾಂ ಧಿ ಹಾಗೂ ರಾಹುಲ್ ಅವರು ಜೈಲಿನಲ್ಲಿ ಇರುತ್ತಾರೆ ಎಂದು ಭವಿಷ್ಯ ನುಡಿದರು.
14 ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ: ವಿನಯ
ವಿಜಯಪುರ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರು ಅತೃಪ್ತಿಯಿಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಸೋತವರೂ ಸಹಿತ 14 ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸೋತಿರುವ ಮಾಜಿ ಶಾಸಕರು ನಮ್ಮ ನಾಯಕರ ಜತೆ ಸಂಪರ್ಕದಲ್ಲಿದ್ದಾರೆ. ರಾಜಕೀಯ ಅನುಭವಿ, ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರುವುದು ಸ್ವಾಗತಾರ್ಹ. ಯಾಕೆಂದರೆ ನಮ್ಮಿಬ್ಬರ ಮಧ್ಯೆ ಯಾವುದೇ ಸ್ಪರ್ಧಾತ್ಮಕ ಪರಿಸ್ಥಿತಿ ಇಲ್ಲ. ಅವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬರಲಿದೆ ಎಂದರು.
ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಟ್ಟರೆ ತಾನೇ ಡಿ.ಕೆ. ಶಿವಕುಮಾರ್ ಸಿಎಂ ಆಗುವುದು? ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಖಂಡಿತಾ ಯಾರಿಗೂ ಬಿಟ್ಟುಕೊಡುವುದಿಲ್ಲ ಎಂದು ಯತ್ನಾಳ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.